ಸಿಂದಗಿ: ಅಲ್ಲೊಬ್ಬ ಇಲ್ಲೊಬ್ಬ ಯಂಕ, ನಾಣಿಯ ಹಾಗೆ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಕನಸು ಕಾಣುತ್ತಿದ್ದಾರೆ. ಅದು ತಿರುಕನ ಕನಸಾಗಿಯೇ ಉಳಿಯಲಿದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡುತ್ತ, ಕಾಂಗ್ರೆಸ್ ನಾಯಕರ ವಿರುದ್ಧ ಮಾತಿನ ದಾಳಿ ಮಾಡಿದರು. ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮಾಡದೇ ನಾಟಕ ಮಾಡಿಕೊಂಡು ಕಾಂಗ್ರೆಸ್ ಜನರಿಗೆ ಮೋಸಮಾಡಿಕೊಂಡು ಬಂದಿದೆ. ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯವನ್ನು ನೋಡಲಾಗದೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲಿದೆ? ಯಾವ ರಾಜ್ಯದಲ್ಲಿದೆ ? ಕಾಂಗ್ರೆಸ್ ಪಕ್ಷದ ನಾಯಕರು ಯಾರು ? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ 140 ಸ್ಥಾನವನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುತ್ತೇವೆ. ದೇಶದಲ್ಲಿ ಬಿಜೆಪಿ ಗಾಳಿ ಬಿಸುತ್ತಿವೆ. ಪಾಕಿಸ್ತಾನದ ಪ್ರಧಾನಿಯೇ ಭಾರತವನ್ನು ಹೊಗಳುತ್ತಿದ್ದಾರೆ. ಅಂದಮೇಲೆ ನೀವೇ ಯೋಚನೆ ಮಾಡಿ ದೇಶದ ಅಭಿವೃದ್ಧಿ ಹೇಗೆ ಆಗುತ್ತಿದೆ ಎಂದು. ನಾನು ಜನರಲ್ಲಿ ಮತ್ತೊಮ್ಮೆ ಕೈಮುಗಿದು ಕೇಳಿಕೊಳ್ಳುತ್ತೇನೆ, ಬಿಜೆಪಿಯನ್ನು ಬೆಂಬಲಿಸಿ ಮತ್ತೊಮ್ಮೆ ಅಧಿಕಾರಕ್ಕೆ ತರಬೇಕೆಂದು ಕೇಳಿಕೊಂಡರು.
ಇದನ್ನೂ ಓದಿರಿ: 50,000 ಕ್ಕೂ ಅಧಿಕ ಮಂದಿಗೆ ಹಕ್ಕುಪತ್ರ ನೀಡಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ