ಸತೀಶ್ ಜಾರಕಿಹೊಳಿ ಕ್ಷಮೆ ಕೇಳದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಳಿಸುತ್ತಾರೆ – ಯಡಿಯೂರಪ್ಪ

night-curfew-in-bangalore-and-other-major-cities-of-karnataka-announced-by-cm-bs-yediyurappa

ಬೆಂಗಳೂರು: ‘ಹಿಂದೂ’ ಪದದ ಕುರಿತು ಶಾಸಕ ಸತೀಶ್ ಜಾರಕಿಹೊಳಿ ಅವಹೇಳನಕಾರಿ ಹೇಳಿಕೆಯ ಕುರಿತು ಮಾತನಾಡಿದ ಬಿ ಎಸ್ ಯಡಿಯೂರಪ್ಪ, ಈ ಮೂಲಕ ಹಿಂದುಗಳಿಗೆ ಅಪಮಾನ ಮಾಡಿದ್ದಾರೆ. ತಕ್ಷಣವೇ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಳಿಸುತ್ತಾರೆ ಎಂದು ಹೇಳಿದ್ದಾರೆ.

ಹಿಂದೂ ಪದವು ಪರ್ಷಿಯನ್ ಭಾಷೆಯಿಂದ ಬಂದಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಈ ಹಿಂದೆ ಹೇಳಿದ್ದರು. ಅಲ್ಲದೆ ಈ ಪದವು ಎಲ್ಲಿಂದ ಹುಟ್ಟಿತು? ಅದು ನಮ್ಮದೇ ? ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ ? ಇವುಗಳನ್ನೆಲ್ಲಾ ಚರ್ಚೆ ಮಾಡಬೇಕಾದ ಅಗತ್ಯವಿದೆ. ಇದರ ಅರ್ಥ ತಿಳಿದರೆ ನಾಚಿಕೆಯಾಗುತ್ತದೆ, ಇದು ಅಸಭ್ಯವಾಗಿದೆ ಎಂದು ಹೇಳಿದ್ದರು.

ಸುದ್ದಿಗಾರ ಜೊತೆಯಲ್ಲಿ ಯಡಿಯೂರಪ್ಪ ಅವರು ಮಾತನಾಡುತ್ತ, ಸತೀಶ್ ಜಾರಕಿಹೊಳಿ ಅವರು ಹಿಂದುಗಳಿಗೆ ಅವಮಾನ ಮಾಡಿದ್ದಾರೆ. ಈ ಕೂಡಲೇ ಅವರು ಕ್ಷಮಾಪಣೆ ಕೇಳಬೇಕೆಂದು ಒತ್ತಾಯ ಮಾಡುತ್ತೇನೆ. ಕ್ಷಮಾಪಣೆ ಕೇಳದಿದ್ದರೆ ರಾಜ್ಯದ ಜನರು ತಕ್ಕ ಪಾಠ ಕಳಿಸುತ್ತಾರೆ ಎಂದು ಹೇಳಿದರು.

ಅವರು ಮಾತನಾಡುತ್ತ, ಕಾಂಗ್ರೆಸ್ ಪಕ್ಷ ಕೇವಲ ಕೇವಲ ಖಂಡನೆ ಮಾಡಿ, ಈ ಹೇಳಿಕೆ ಅವರ ವಯಕ್ತಿಕ ಹೇಳಿಕೆ, ಇದು ಕಾಂಗ್ರೆಸ್ ನಿಲುವಲ್ಲ ಎಂದು ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಅವರು ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು. ಈ ಹೇಳಿಕೆಯ ಮೂಲಕ ತಾನು ದೊಡ್ಡವನಾಗುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ, ಈ ರೀತಿಯ ಹಿಂದುಗಳಿಗೆ ಅಪಮಾನ ಮಾಡುವಂತಹ ಹೇಳಿಕೆಗೆ ತಕ್ಷಣ ಕ್ಷಮೆ ಕೇಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ದೇಹದ ಉಷ್ಣತೆಯನ್ನು ನಿಯಂತ್ರಿಸಲು ಇಲ್ಲಿದೆ ಕೆಲವು ಮನೆಮದ್ದುಗಳು

LEAVE A REPLY

Please enter your comment!
Please enter your name here