ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಮಟ್ಟಿಗಿನ ಇಳಿಕೆ ಕಂಡುಬರುತ್ತಿದ್ದು, ಜೂನ್ 7 ರ ನಂತರ ಲಾಕ್ ಡೌನ್ ವಿಸ್ತರಿಸಬೇಕೋ ಬೇಡವೋ ಎನ್ನುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕರೆದ ಸಭೆ ಮುಕ್ತಾಯವಾಗಿದೆ.
ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಇಂದು ಸಂಜೆ ನಡೆದ ಸಭೆಯಲ್ಲಿ ಲಾಕ್ ಡೌನ್ ಒಂದು ವಾರ ವಿಸ್ತರಿಸುವ ಕುರಿತು ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಮುಖ್ಯಮಂತ್ರಿಗಳು ಅಂತಿಮ ನಿರ್ಧಾರವನ್ನು ನಾಳೆ ತಿಳಿಸಲಿದ್ದಾರೆ ಎಂದು ಹೇಳಲಾಗಿದೆ.
ಇಂದು ನಡೆದ ಸಭೆಯಲ್ಲಿ ಸಂಭವನೀಯ ಮೂರನೆಯ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಚಿಸಲಾಗಿದ್ದ ಡಾ. ದೇವಿಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆಯಲ್ಲಿ ಸಚಿವರು, ಕೋವಿಡ್ ಉಸ್ತುವಾರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದರು.
ಇದನ್ನೂ ಓದಿರಿ: ಕೊರೋನಾ ಕಾಲದಲ್ಲಿ ಪಾದ್ಬಾಂಧವನಾದ ಬಂಗಾರ : ಸಂಕಷ್ಟ ತೀರಿಸೋದಕ್ಕೆ ಬಂಗಾರ ಅಡವಿಡುವವರ ಪ್ರಮಾಣದಲ್ಲಿ ಏರಿಕೆ