ನಾ ನಾಯಕಿ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಬಂಪರ್ ಘೋಷಣೆ; ಪ್ರತಿ ತಿಂಗಳು ₹2,000

priyanka-gandhi-vadra-speech-in-na-nayaki-convention

ಬೆಂಗಳೂರು: ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಾಂಗ್ರೆಸ್ ‘ನಾ ನಾಯಕಿ’ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ ಮಾಡಿದೆ. ಈ ಕಾರ್ಯಕ್ರಮದಲ್ಲಿ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಜಾರಿಗೊಳಿಸಿ ರಾಜ್ಯದ ಮಹಿಳೆಯರಿಗೆ ಮಾಸಿಕ ₹ 2000 ನೀಡಲಾಗುವುದು ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ.

ಇಂದು ಆಯೋಜಿಸಲಾಗಿದ್ದ ನಾ ನಾಯಕಿ ಕಾರ್ಯಕ್ರಮಕ್ಕೆ ಪ್ರಿಯಾಂಕಾ ವಾದ್ರಾ ಆಗಮಿಸಿದ್ದರು. ಇದೇ ಸಮಯದಲ್ಲಿ ಕಾಂಗ್ರೆಸ್ ತಾವು ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಕುರಿತು ಘೋಷಣೆ ಮಾಡಿದೆ. ಈ ಯೋಜನೆಯಂತೆ ಪ್ರತಿ ಗ್ರಹಿಣಿಯರಿಗೆ ಮಾಸಿಕ 2000 ತಲುಪಿಸಲಿದೆ. ಬೆಲೆ ಏರಿಕೆಯ ಸಂಕಷ್ಟದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಹೀಗಾಗಿ ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಕೊಡುಗೆ ನೀಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇನ್ನು ಪ್ರಿಯಾಂಕಾ ವಾದ್ರಾ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕ ಸರ್ಕಾರದ ವಿರುದ್ಧ 40 ಪರ್ಸೆಂಟ್​​ ಕಮಿಷನ್​ ಆರೋಪವಿದೆ. ಪಿಎಸ್​ಐ ನೇಮಕಾತಿ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪಗಳಿವೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.

ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು, ಬಡವರ ಸಮಸ್ಯೆಗಳಿಗೆ ಕೇಂದ್ರ, ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಅನಗತ್ಯ ವಿವಾದಗಳನ್ನು ಸೃಷ್ಟಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಶ್ರೀಮಂತರ ಪರ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: Nepal Plane Crash: ನೇಪಾಳ ವಿಮಾನ ದುರಂತದ ಕೊನೇ ಕ್ಷಣದ ವಿಡಿಯೋ ಫೋನ್​ನಲ್ಲಿ ಸೆರೆ!

LEAVE A REPLY

Please enter your comment!
Please enter your name here