ಹೌದು..! ಇಂದು ಅಂದರೆ ಸೋಮವಾರ ಬೆಳಿಗ್ಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಅನಂತ ಕುಮಾರ್ ಅವರು ಕ್ಯಾನ್ಸರ್ ನಿಂದ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ಇವರು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಹೆಸರು ಮಾಡಿದ್ದವರು. ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ವಿಮಾನಯಾನ ಖಾತೆ ಸಚಿವರಾಗಿ ಅನೇಕ ಮಹತ್ವದ ಕಾರ್ಯಗಳನ್ನು ಮಾಡಿದ್ದರು. ಬೆಂಗಳೂರಿನ ದೇವನಹಳ್ಳಿ ವಿಮಾನ ನಿಲ್ದಾಣದ  ಕಾಮಗಾರಿ ಆರಂಭಿಸಲು  ಇವರು ಸಹ ಕಾರನಿಕರ್ತರು. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ಮೊದಲಿಗರು ಎಂಬ ಕೀರ್ತಿಗೆ ಪಾತ್ರರಾಗಿದ್ದರು.

ನರೇಂದ್ರ ಮೋದಿಯವರ ಕ್ಯಾಬಿನೆಟ್ ನಲ್ಲಿ ಸಚಿವರಾಗಿ ಅನೇಕ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ. ಅಲ್ಲದೇ ಇವರ ಕನಸಿನಂತೆಯೇ ಜನೌಷಧಿ ಕೇಂದ್ರದ ಸ್ಥಾಪನೆಗೂ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. 

ಇಂದು ಪ್ರಧಾನಿ ನರೇಂದ್ರ ಮೋದಿಯವರು ಅನಂತ ಕುಮಾರ್ ಅವರ ನಿವಾಸಕ್ಕೆ ಬೇಟಿ ನೀಡಿ, ಅಂತಿಮ ದರ್ಶನ ಪಡೆದರು. ಅಲ್ಲದೆ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.  

ಅನಂತ ಕುಮಾರ್ ಅವರಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಂದು ಅವರ ನಿವಾಸದಲ್ಲಿ ಇಡಲಾಗಿದ್ದು, ನಾಳೆ ಬೆಳಿಗ್ಗೆ ಅಂದರೆ ಮಂಗಳವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು ತಿಳಿದು ಬಂದಿದೆ. 

ಮಧ್ಯಾಹ್ನ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು.

Image Copyright : Google.com

LEAVE A REPLY

Please enter your comment!
Please enter your name here