cardiologist-dr-c-n-manjunath-to-inaugurate-mysuru-dasara-says-minister-s-t-somashekhar

ಮೈಸೂರು: ಈ ಬಾರಿಯ ದಸರಾ ಉದ್ಘಾಟನೆಯನ್ನು ಹೃದಯ ತಜ್ಞ ಡಾ. ಸಿ.ಎನ್. ಮಂಜುನಾಥ್ ಅವರು ಉದ್ಘಾಟಿಸಲಿದ್ದಾರೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಈ ಬಾರಿಯ ಮೈಸೂರು ದಸರಾ ಉತ್ಸವವನ್ನು ತಜ್ಞರ ತಂಡ ನೀಡಿದ ಸಲಹೆಗಳ ಪ್ರಕಾರವೇ ಆಯೋಜಿಸಲಾಗುವುದು. ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ 300 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಈ ಕುರಿತಂತೆ ಪೊಲೀಸ್ ಆಯುಕ್ತರು ಮತ್ತು ಜನಪ್ರತಿನಿಧಿಗಳ ಸಭೆಯನ್ನು ಕರೆದು ತೀರ್ಮಾನಕ್ಕೆ ಬರಲಾಗುವುದು. ಪ್ರತಿಬಾರಿಯಂತೆಯೇ ಮೈಸೂರು ಅರಮನೆ ಸೇರಿದಂತೆ ಹಲವೆಡೆ ಅಗತ್ಯ ದೀಪಾಲಂಕಾರ ಮಾಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಪ್ರತಿಬಾರಿಯಂತೆಯೇ ಈ ಬಾರಿಯೂ ವಿಶೇಷ ವ್ಯಕ್ತಿಗಳನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಈ ಬಾರಿ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಾಧಿಕಾರಿ ಡಾ. ನವೀನ್ ಕುಮಾರ್, ಕಾನ್ಸ್ಟೆಬಲ್ ಕುಮಾರ್ ಪಿ., ಸ್ಟಾಪ್ ನರ್ಸ್ ರುಕ್ಮಿಣಿ, ಆಶಾಕಾರ್ಯಕರ್ತೆ ನೂರ್ ಜಾನ್, ಸಾಮಾಜಿಕ ಕಾರ್ಯಕರ್ತ ಅಯೂಬ್ ಅಹಮ್ಮದ್ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿರಿ: ವಿದ್ಯಾಗಮ ಕಾರ್ಯಕ್ರಮ ತಾತ್ಕಾಲಿಕ ಸ್ಥಗಿತ: ಎಸ್‌. ಸುರೇಶ್‌ ಕುಮಾರ್‌

LEAVE A REPLY

Please enter your comment!
Please enter your name here