ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲದಿನಗಳಿಂದ ಇದ್ದಕ್ಕಿದ್ದಂತೆ ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಕೇಂದ್ರದಿಂದ ತಜ್ಞರ ತಂಡ ಇಂದು ರಾಜ್ಯಕ್ಕೆ ಆಗಮಿಸಿದೆ. ಇಂದು ಮುಖ್ಯಮಂತ್ರಿಗಳ ಜೊತೆಯಲ್ಲಿ ಸಭೆ ನಡೆಸಿದ್ದು, ಸೋಂಕು ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತಿರುವ ಕ್ರಮಗಳ ಮಾಹಿತಿಯನ್ನು ಪಡೆದುಕೊಂಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಂಡ ಕ್ರಮಗಳ ಮಾಹಿತಿಯನ್ನು ಪಡೆದರು. ಇದರೊಂದಿಗೆ ಈ ಸಮಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.
ರಾಜ್ಯಕ್ಕೆ ಕೇಂದ್ರದ ಇಎಂಅರ್ ನಿರ್ದೇಶಕ ರವೀಂದ್ರನ್, ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಕಾರ್ಯನಿರ್ವಾಹಕರು ಅರ್ತಿ ಅಹುಜಾ ಅವರನ್ನೊಳಗೊಂಡ ತಂಡ ಆಗಮಿಸಿ ಮಾಹಿತಿ ಕಲೆಹಾಕಿದೆ.