ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಗೆದ್ದು, ಕೇಂದ್ರ ಸರಕಾರದ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಅಂಗಡಿ ಅವರು ಇಂದು ನಿಧನರಾಗಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿ ಅಂಗಡಿಯವರು ಕಾರ್ಯನಿರ್ವಹಿಸುತ್ತಿದ್ದರು. ಕೆಲದಿನಗಳ ಹಿಂದೆ ಕರೋನಾಗೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಯಾವುದೇ ತೀವ್ರತರವಾದ ರೋಗಲಕ್ಷಣಗಳು ಕಂಡುಬರದಿದ್ದರೂ ಇದ್ದಕ್ಕಿದ್ದಂತೆ ಇಂದು ಬೆಳಿಗ್ಗಿನಿಂದ ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಆದರೆ ಸಂಜೆಯ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.