centre-lauds-karnatakas-efforts-to-curtail-spread-of-covid-19-health-ministry
ggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggggg

ನವದೆಹಲಿ: ಕೋವಿಡ್ – 19 ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಅಗತ್ಯ ಕ್ರಮಗಳು ಸಮಾಧಾನಕಾರವಾಗಿದ್ದು, ಸೋಂಕು ಮತ್ತು ಸಾವಿನ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಿಸಲು ಸಹಕಾರಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ರಾಜ್ಯ ಸರಕಾರ ಕೋವಿಡ್ ಸೋಂಕು ನಿರ್ವಹಿಸುತ್ತಿರುವ ಕುರಿತು ಮಾಹಿತಿ ಪಡೆಯುವುದು ಮತ್ತು ವ್ಯಾಕ್ಸಿನ್ ಹಂಚಿಕೆಯ ಕುರಿತಂತೆ ಮಾಡಿಕೊಳ್ಳುತ್ತಿರುವ ಸಿದ್ಧತೆಗಳ ಕುರಿತು ವಿಡಿಯೋ ಸಂವಾದ ನಡೆಸುವ ನಡೆಸಿದ ಕೇಂದ್ರ ಆರೋಗ್ಯ ಸಚಿವರು, ಕರ್ನಾಟಕದ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಲಾಕ್ ಡೌನ್ ತೆರವುಗೊಳಿಸಿದ ನಂತರ ಕೇಂದ್ರದ ಮಾರ್ಗಸೂಚಿಯ ಅನುಸಾರವಾಗಿ ರಾಜ್ಯ ಸರಕಾರ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿತ್ತು. ಆ ನಂತರದಲ್ಲಿ ಕೋವಿಡ್ ಸೋಂಕಿತರ ಮತ್ತು ಸಾವಿನ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಚೇತರಿಕೆ ಕಂಡುಬಂದಿತು. ಅದರಂತೆಯೇ ಇನ್ನು ಮುಂದೆಯೂ ಎಚ್ಚರಿಕೆಯಿಂದ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರಕಾರದ ಕಡೆಯಿಂದ ಸಲಹೆ ನೀಡಿದರು.

ಇನ್ನು ಮುಂದೆ ದೀಪಾವಳಿ ಹಬ್ಬ ಮತ್ತು ಚಳಿಗಾಲ ಪ್ರಾರಂಭವಾಗುತ್ತಿದ್ದು, ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಂತರಾಷ್ತ್ರೀಯ ಮತ್ತು ಅಂತಾರಾಜ್ಯ ಪ್ರಯಾಣಿಕರ ಮೇಲೆ ಗಮನವಿರಿಸಿ, ಸಂಶಯಾಸ್ಪದ ವ್ಯಕ್ತಿಗಳ ತಪಾಸಣೆಗೆ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ. ಇದಲ್ಲದೇ ವ್ಯಾಕ್ಸಿನ್ ಹಂಚಿಕೆಗೆ ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಈಗಾಗಲೇ ತಿಳಿಸಲಾಗಿದ್ದು, ಈ ದಿಶೆಯಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.

LEAVE A REPLY

Please enter your comment!
Please enter your name here