ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಸರಕಾರದ ಆದೇಶದ ಅನುಸಾರವಾಗಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ – 2021 (UGCET-2021 REGISTRATION) ಕ್ಕೆ ಅರ್ಹತೆ ಮೆರಿಟನ್ನು ಆಧರಿಸಿ ಕರ್ನಾಟಕ ರಾಜ್ಯದಲ್ಲಿನ ಸರಕಾರಿ/ವಿಶ್ವವಿದ್ಯಾಲಯ/ ಖಾಸಗಿ ಅನುದಾನಿತ/ಖಾಸಗಿ ಅನುದಾನರಹಿತ ವೃತ್ತಿ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮಾ, ಡಿ-ಫಾರ್ಮಾ, ಕ್ರಷಿ ವಿಜ್ಞಾನ ಕೋರ್ಸ್, ವೆಟರಿನರಿ ಕೋರ್ಸ್ ಗಳಲ್ಲಿ ಲಭ್ಯವಿರುವ ಸರಕಾರದ ಪಾಲಿನ ಸೀಟುಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಈ ಮೇಲಿನ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವುದಕ್ಕೆ ಅಭ್ಯರ್ಥಿಗಳು ಆನ್ ಲೈನ್ ಮೂಲಕ ನೋಂದಾಯಿಸಿಕೊಂಡು, ಅರ್ಜಿ ಸಲ್ಲಿಸಿ, ಅರ್ಜಿ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು, ಕೆಇಎ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ: ಅರ್ಹತಾ ಕಂಡಿಕೆಗಳು, ಶೈಕ್ಷಣಿಕ ಅರ್ಹತೆ ಹಾಗೂ ಇತರ ವಿವರಗಳನ್ನು ಒಳಗೊಂಡ ಯುಜಿಸಿಇಟಿ-2021 ಮಾಹಿತಿ ಪುಸ್ತಕವನ್ನು ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ನಲ್ಲಿ ಪ್ರಚುರಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಪ್ರಕಟಣೆಯನ್ನು ಓದಿರಿ.
ಅರ್ಜಿ ಆರಂಭ ದಿನಾಂಕ : 15-06-2021
ಅರ್ಜಿ ಕೊನೆಯ ದಿನಾಂಕ : 10-07-2021