chamarajanagar-hospital-tragedy-clean-chit-to-mysuru-dc

ಚಾಮರಾಜನಗರ: ಜಿಲ್ಲಾ ಆಸ್ಪತ್ರೆಯಲ್ಲಿ ಮೇ 2 ರಂದು ನಡೆದ ಆಕ್ಸಿಜನ್ ದುರಂತಕ್ಕೆ ಚಾಮರಾಜನಗರ ಡಿಸಿ ರವಿ ಅವರೇ ಹೊಣೆ ಎಂದು ನಿವೃತ್ತ ನ್ಯಾಯಾದೀಶರ ವರದಿಯಲ್ಲಿ ತಿಳಿಸಿದೆ. ಈ ಮೂಲಕ ಆರೋಪಿತ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಿದೆ.

ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿ ನೇಮಿಸಲಾಗಿತ್ತು. ಅಂದು ನಡೆದ ದುರಂತಕ್ಕೆ ಮೈಸೂರು ಡಿಸಿ ರೋಹಿಣಿಯವರೇ ನೇರವಾಗಿ ಹೊಣೆ ಎಂದು ಆರೋಪ ಕೇಳಿ ಬಂದಿತ್ತು. ರೋಹಿಣಿ ಸಿಂಧೂರಿಯವರು ಚಾಮರಾಜನಗರ ಜಿಲ್ಲೆಗೆ ಬರಬೇಕಿದ್ದ ಆಕ್ಸಿಜನನ್ನು ತಡೆಹಿಡಿದಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇಂದು ನಿವೃತ್ತ ನ್ಯಾಯಾದೀಶರ ತನಿಕಾ ವರದಿ ಸಲ್ಲಿಕೆಯಾಗಿದ್ದು, ಇದರಲ್ಲಿ ಮೈಸೂರು ಜಿಲ್ಲಾಧಿಕಾರಿಯವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.

ಈ ವರದಿಯು ರೋಹಿಣಿ ಸಿಂಧೂರಿ ಆಮ್ಲಜನಕ ಪೂರೈಕೆಗೆ ತಡೆಯೊಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಲು ಆಗುವುದಿಲ್ಲ ಎಂದು ಸಮಿತಿ ತಿಳಿಸಿದೆ.

ಮೇ 16 ಕ್ಕೆ ಅಪ್ಪಳಿಸಲಿದೆ ಚಂಡಮಾರುತ: 4 ದಿನ ಭಾರಿ ಮಳೆಯಾಗುವ ಮುನ್ಸೂಚನೆ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here