ನಾಡಿನಾದ್ಯಂತ 67ನೇ ಕನ್ನಡ ರಾಜ್ಯೋತ್ಸವ ಆಚರಣೆ: ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯ

cm-bommai-greets-people-of-karnataka-on-67th-kannada-rajyotsava

ಬೆಂಗಳೂರು: ರಾಜ್ಯದಾದ್ಯಂತ 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡುತ್ತ, ‘ಕನ್ನಡ ನಾಡು ಪುಣ್ಯದ ಬೀಡು. ಅತ್ಯಂತ ಸಂಪತ್ದಬರಿತ ನಾಡು ನಮ್ಮ ನಾಡು. ಈ ನಾಡಿನಲ್ಲಿ ಹುಟ್ಟ ಬೇಕಾದರೆ ಏಳೇಳು ಜನ್ಮದ ಪುಣ್ಯ ಮಾಡಿರಬೇಕು. ಕರ್ನಾಟಕದ ಏಕೀಕರಣ ಹೋರಾಟದ ಯಾರೂ ಮರೆಯುವಂತಿಲ್ಲ. ಮದ್ರಾಸ್ ಕರಾವಳಿ, ಮಧ್ಯ ಕರ್ನಾಟಕ ಅಂತ ಹಂಚಿ ಹೋಗಿತ್ತು. ಆದರೆ, ಅದನ್ನ ಆಲೂರು ವೆಂಕಟರಾಯರು ಹೋರಾಟ ಮಾಡಿ ಕರ್ನಾಟಕ ಏಕೀಕರಣ ಮಾಡಿದರು. ಇದರಲ್ಲಿ ಹಲವಾರು ಮಹನೀಯರ ಶ್ರಮ ಇದೆ. ಶಿಕ್ಷಣ ಆರೋಗ್ಯ, ಉದ್ಯೋಗ ಜೊತೆ ಭಾರತದ ಭವಿಷ್ಯವನ್ನೂ ನಿರ್ಮಾಣ ಮಾಡುವ ಶಕ್ತಿ ಕರ್ನಾಟಕಕ್ಕೆ ಇದೆ’ ಎಂದು ಹೇಳಿದರು.

ಇನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದು, ‘ನಾಡಿನ ಏಕತೆ, ಸಮಾನತೆ, ಸ್ವಾಭಿಮಾನ ಹಾಗೂ ಸಹಬಾಳ್ವೆಯ ಸಂಕೇತವೇ ರಾಜ್ಯೋತ್ಸವ. ಪ್ರತಿಯೊಬ್ಬ ಕನ್ನಡಿಗನಿಗೂ ಆರ್ಥಿಕ & ಸಾಮಾಜಿಕ ಭದ್ರತೆ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಕರ್ನಾಟಕ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುತ್ತಿದೆ: ಡಿಕೆ ಶಿವಕುಮಾರ್

LEAVE A REPLY

Please enter your comment!
Please enter your name here