ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ-ಬೊಮ್ಮಾಯಿ

cm-bommai-tweet-about-pm-modi-mother

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಅನಾರೋಗ್ಯದ ಸಂಬಂಧ ಆಸ್ಪತ್ರೆ ಸೇರಿದ್ದುರು, ಆದರೆ ಇಂದು ಬೆಳಗ್ಗೆ 3.30 ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ (100) ವಿಧಿವಶರಾಗಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಕಂಬನಿ ಮಿಡಿದಿದ್ದಾರೆ.

ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿರಿ: ನೋವಿನಲ್ಲೂ ಕರ್ತವ್ಯ ಪಾಲನೆಗೆ ಹಾಜರಾದ ದೇಶದ ಪ್ರಧಾನ ಸೇವಕ !

LEAVE A REPLY

Please enter your comment!
Please enter your name here