ಹುಬ್ಬಳ್ಳಿ: ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬರಮಾಡಿಕೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಗೆ ಹೊರಟಿದ್ದಾರೆ.
ಹುಬ್ಬಳ್ಳಿಯಲ್ಲಿ ಆಯೋಜನೆಗೊಂಡಿರುವ 26 ನೇಯ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಆಗಮಿಸುತ್ತಿದ್ದು, ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪ್ರಧಾನಿಗಳು ವಿಮಾನ ನಿಲ್ದಾಣದಿಂದ ನೆಹರೂ ಮೈದಾನಕ್ಕೆ ಇರುವ ಏಳುವರೆ ಕಿಲೋಮೀಟರ್ ರೋಡ್ ಶೋ ಮಾಡಿಕೊಂಡು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿರಿ: National Youth Festival: ಇಂದು ಗಂಡುಮೆಟ್ಟಿದ ನಾಡು ಹುಬ್ಬಳ್ಳಿಗೆ ಪ್ರಧಾನಿ ಮೋದಿ
ಪ್ರಧಾನಿಗಳನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲು ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದ ಸಚಿವ ಸಂಪುಟ ಭಾಗಿಯಾಗಲಿದೆ. ಈ ಹಿನ್ನೆಲೆಯಲ್ಲಿ ಬಸವರಾಜ್ ಬೊಮ್ಮಾಯಿಯವರು ಹುಬ್ಬಳ್ಳಿಗೆ ತೆರಳಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಇದನ್ನೂ ಓದಿರಿ: ಹುಬ್ಬಳ್ಳಿಗೆ ಪ್ರಧಾನಿ ಆಗಮನ ಹಿನ್ನೆಲೆ, ಹೆಚ್ಚುವರಿ ಪೊಲೀಸ್ ಬಂದೋಬಸ್ತ್