ನವದೆಹಲಿ: ಇಂದು (ಶುಕ್ರವಾರ) ಮುಖ್ಯಮಂತ್ರಿ ಯಡಿಯೂರಪ್ಪ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು. ಈ ಕುರಿತು ಮಾತನಾಡಿದ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿ ಕುರಿತಾಗಿ ಚರ್ಚಿಸಿದ್ದೇನೆ, ಬೇಡಿಕೆ ಈಡೇರಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿಗಳನ್ನು ಭೇಟಿಯಾದ ಯಡಿಯೂರಪ್ಪನವರು ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆಯಲ್ಲಿ ರಾಜ್ಯಕ್ಕೆ ಜಿ ಎಸ್ ಟಿ ಪರಿಹಾರ ಪಾಲನ್ನು ಹೆಚ್ಚಿಸುವಂತೆಯೂ ಹಾಗೂ ಬಾಕಿಯಿರುವ ಇತರೆ ಹಣವನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
ನಾಳೆ ಅಂದರೆ ಶನಿವಾರ ಮತ್ತಷ್ಟು ನಾಯಕರ ಜೊತೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿಗಳ ದೆಹಲಿ ಭೇಟಿಯು ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿರುವುದು ಸುಳ್ಳಲ್ಲ.
ಇದನ್ನೂ ಓದಿರಿ: ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಫಲಿತಾಂಶ ನೋಡುವುದು ಹೇಗೆ ? ಇಲ್ಲಿದೆ ಮಾಹಿತಿ