ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರೂಪಾಯಿ ಆರ್ಥಿಕ ನೆರವು ನೀಡುವ “ಬಾಲ ಸೇವಾ ಯೋಜನೆ”ಯನ್ನು ಇಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದರು.
ಕೇಂದ್ರ ಸರಕಾರದ ಸಲಹೆಯ ಮೇರೆಗೆ ಅನಾಥ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಈ ನೆರವನ್ನು ನೀಡಲಾಗುತ್ತಿದೆ. ಕುಟುಂಬದ ಆಸರೆಯಿಲ್ಲದ, 10 ವರ್ಷ ಒಳಗಿರುವ ಮತ್ತು ಕೋವಿಡ್ ನಿಂದಾಗಿ ಅನಾಥರಾಗಿರುವ ಮಕ್ಕಳ ಪೋಷಣೆ ಮತ್ತು ಶಿಕ್ಷಣದ ಪೂರೈಸುವ ದೃಷ್ಟಿಯಿಂದ ಅವರನ್ನು ಸರ್ಕಾರಿ ಸ್ವಾಮ್ಯದ ಮಾದರಿ ವಸತಿ ಶಾಲೆಗಳಲ್ಲಿ ದಾಖಲು ಮಾಡಿಕೊಳ್ಳಲಾಗುವುದು. ಹತ್ತೆನೆಯ ತರಗತಿಯನ್ನು ಪೂರೈಸಿದ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.
21 ವರ್ಷ ತುಂಬಿದ ನಂತರ ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ಸೇರಿದಂತೆ ಮುಂದಿನ ಜೀವನಕ್ಕೆ ಅನುಕೂಲವಾಗುವಂತೆ 1 ಲಕ್ಷ ನೆರವನ್ನು ನೀಡಲಾಗುವುದು. ರಕ್ಷಣೆಗೆ ಯಾರೂ ಇಲ್ಲದ ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಸರ್ಕಾರದಿಂದ ಮಾರ್ಗದರ್ಶಿ/ಹಿತೈಷಿಗಳನ್ನು ನೇಮಿಸಲಾಗುವುದು ಎಂದು ಬಾಲ ಸೇವಾ ಯೋಜನೆ ಅಡಿಯಲ್ಲಿ ಅನಾಥ ಮಕ್ಕಳಿಗೆ ವಿಶೇಷ ಪ್ಯಾಕೇಜ್ ಘೋಷಣೆಮಾಡಿ ಮುಖ್ಯಮಂತ್ರಿಗಳು ತಿಳಿಸಿದರು.
ಇದನ್ನೂ ಓದಿರಿ: ಲಾಕ್ ಡೌನ್ ವಿಸ್ತರಣೆ: ಇಲ್ಲಿದೆ ನಿಮಗಾಗಿ ಬಹುಮುಖ್ಯ ಮಾಹಿತಿ