coronavirus-pandemic-karnataka-siddaramaiah-bsy-govt-attempt-state-in-covid

ನಿನ್ನೆ ಶಿವಮೊಗ್ಗದಲ್ಲಿ ಮಾತನಾಡಿದ ಸಿದ್ದರಾಮಯ್ಯ ರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾದ ಪ್ರಭಲ ಅಲೆಯು ಇದೆ. ಇದರಿಂದಾಗಿ ಕಾಂಗ್ರೆಸ್ ಎರಡೂ ಚುನಾವಣಾ ಕ್ಷೇತ್ರಗಳಲ್ಲಿ ಜಯಗಳಿಸುತ್ತದೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳು ಯಾವ ಆಧಾರದ ಮೇಲೆ ತಮ್ಮ ವರಧಿಯನ್ನು ನೀಡಿವೆ ಎನ್ನುವುದು ತಿಳಿದಿಲ್ಲ. ನಾನು ಪ್ರಚಾರಕ್ಕೆ ತೆರಳಿದ ಸಮಯದಲ್ಲಿ ಎರಡೂ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪರವಾದ ಅಲೆಗಳು ಇರುವುದನ್ನು ನೋಡಿದ್ದೇನೆ. ಇದರಿಂದಾಗಿ ಉಪಚುನಾವಣಾ ಕಣದಲ್ಲಿ ಜಯಗಳಿಸುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಯುವಜನತೆ ನಿರುದ್ಯೋಗಗಳಿಂದ ಬೇಸತ್ತು ನಿತೀಶ್ ಕುಮಾರ್ ಅವರ ವಿರುದ್ಧ ಮತಚಲಾಯಿಸಿದ್ದಾರೆ. ನರೇಂದ್ರ ಮೋದಿಯವರ ಕೇಂದ್ರ ಮತ್ತು ನಿತೀಶ್ ಕುಮಾರ್ ಅವರ ರಾಜ್ಯ ಸರಕಾರದ ಆಡಳಿತಕ್ಕೆ ಜನತೆ ಬೇಸತ್ತಿದ್ದಾರೆ. ಬಿಹಾರದಲ್ಲಿ ಮಹಾಘಟಬಂಧನ್ ಜಯಗಳಿಸಬಹುದು ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ ಎಂದು ಹೇಳಿದರು.

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸರು ತನಿಖೆ ನಡೆಸಿ, ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ವಿನಯ್ ಕುಲಕರ್ಣಿ ಅವರ ಹೆಸರು ಇಲ್ಲಾ. ಆದರೆ ಈಗ ದಿಡೀರ್ ಎಂದು ಸಿಬಿಐ ವಿನಯ್ ಕುಲಕರ್ಣಿಯವರನ್ನು ಬಂಧಿಸಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ತುಂಬಿದೆ. ಇಂತಹ ಬೆದರಿಕೆಯ ತಂತ್ರಕ್ಕೆ ಕಾಂಗ್ರೆಸ್ ಹೆದರುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here