ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು (ಅ. 19) ಹೊರಬೀಳಲಿದೆ. ದೇಶದ ಅತ್ಯಂತ ಹಳೆಯ ಪಕ್ಷವೊಂದಕ್ಕೆ ಬರೋಬ್ಬರಿ 24 ವರ್ಷಗಳ ನಂತರ ಗಾಂಧಿ ಕುಟುಂಬೇತರ ಅಧ್ಯಕ್ಷ ಸ್ಥಾನಕ್ಕೆ ಏರಲಿದ್ದಾರೆ.
ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಕಳೆದ ಸೋಮವಾರ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಅಭ್ಯರ್ಥಿಗಳಾಗಿ ಕರ್ನಾಟಕದ ಮಲ್ಲಿಕಾರ್ಜುನ್ ಖರ್ಗೆ ಮತ್ತು ಕೇರಳದ ಶಶಿ ತರೂರ್ ಸ್ಪರ್ದಿಸಿದ್ದು, ಇಂದು ಕಾಂಗ್ರೆಸ್ ನ ಪ್ರಧಾನ ಕಚೇರಿಯಲ್ಲಿ 10 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಗಾಂಧಿ ಕುಟುಂಬಕ್ಕೆ ಹತ್ತಿರುವಿರುವ ಹಾಗೂ ಪಕ್ಷದಲ್ಲಿ ಹೆಚ್ಚು ಬೆಂಬಲ ಹೊಂದಿರುವ ಖರ್ಗೆ ಅವರೇ ಜಯ ಗಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಹೆಚ್ಚಾಗಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.
ಇದನ್ನು ಓದಿರಿ: Box Office Collection: ಒಟ್ಟು 18 ದಿನಗಳಲ್ಲಿ 150 ಕೋಟಿ ಬಾಚಿದ ಕಾಂತಾರ !