corona positive four childrens in vathara school

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಚರ್ಚೆ ನಡೆಸುತ್ತಿರುವ ಸಮಯದಲ್ಲಿ ಆಘಾತಕಾರಿ ಸುದ್ದಿಯೊಂದು ಬಂದಿದ್ದು, ವಿದ್ಯಾಗಮ ಯೋಜನೆಯಡಿ ನಡೆಸುತ್ತಿರುವ ವಠಾರ ಶಾಲೆಯಲ್ಲಿ ಒಬ್ಬರು ಶಿಕ್ಷಕರು ಮತ್ತು ನಾಲ್ವರು ವಿದ್ಯಾರ್ಥಿಗಳಿಗೆ ಕೋರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿದೆ.

ಕಳೆದ ಇಪ್ಪತ್ತು ದಿನಗಳ ಹಿಂದೆ ಬೆಂಗಳೂರಿನ ಮಾಶಾಳ ಸರಕಾರಿ ಶಾಲೆಯಲ್ಲಿ ಮುಖ್ಯಶಿಕ್ಷಕರಿಗೆ ಕೊರೋನಾ ಸೋಂಕು ತಗಳಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಉಳಿದ 20 ಸಹ ಶಿಕ್ಷಕರಿಗೂ ಕೊರೋನಾ ಟೆಸ್ಟ್ ಮಾಡಲಾಗಿತ್ತು. ಟೆಸ್ಟ್ ವರದಿಯು ನೆಗೆಟಿವ್ ಬಂದ ನಂತರ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದರು.

ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ 207 ವಿದ್ಯಾರ್ಥಿಗಳನ್ನೂ ಕೊರೋನಾ ಪರೀಕ್ಷೆಗೆ ಒಳಪಡಿಸಲಾಯಿತು. ಈ ಸಮಯದಲ್ಲಿ ನಾಲ್ವರು ವಿದ್ಯಾರ್ಥಿಗಳಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಚರ್ಚೆಗಳು ನಡೆಯುತ್ತಿದ್ದು, ಈ ಸಮಯದಲ್ಲಿ ನಡೆದ ಘಟನೆಯು ಮತ್ತೊಮ್ಮೆ ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿರುವುದಂತೂ ಸುಳ್ಳಲ್ಲ.

LEAVE A REPLY

Please enter your comment!
Please enter your name here