corona positive to four staff of karnataka-cm-yediyurappas-home-office-in-bengaluru

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿನ ನಾಲ್ವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ತೀವ್ರ ಆತಂಕವನ್ನು ಸೃಷ್ಟಿಸಿದೆ. ಮತ್ತೊಮ್ಮೆ ಗೃಹ ಕಚೇರಿ ಕೃಷ್ಣಾವನ್ನು ಸೀಲ್ ಡೌನ್ ಮಾಡುವ ಲಕ್ಷಣಗಳು ಕಾಣುತ್ತಿವೆ.

ಕಳೆದ ವಾರ ಗೃಹ ಕಚೇರಿ ಕೃಷ್ಣಾದಲ್ಲಿನ ಮಹಿಳಾ ಕಾನ್ಸ್ಟೇಬಲ್ ಒಬ್ಬರ ಪತಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾವನ್ನು ಸೀಲ್ ಡೌನ್ ಮಾಡಲಾಗಿತ್ತು. ಆದರೆ ಈಗ ಎ.ಎಸ್.ಐ., ಮಹಿಳಾ ಕಾನ್ಸ್ಟೇಬಲ್, ಅಗ್ನಿಶಾಮಕ ಸಿಬ್ಬಂದಿ ಮತ್ತು  ಎಲೆಕ್ಟ್ರೀಷಿಯನ್ ಗೆ ಕೊರೊನಾ ಸೋಂಕು ದೃಡಪಟ್ಟಿದೆ. 

ಸಿ.ಎಂ. ಗೃಹ ಕಚೇರಿ ಕೃಷ್ಣಾದಲ್ಲಿನ ಸಿಬ್ಬಂದಿಗೆ ಸೋಂಕು ದೃಡವಾಗಿರುವುದು ತುಂಬಾ ಆತಂಕವನ್ನು ಉಂಟುಮಾಡಿದೆ. ಹೀಗಾಗಿ ಇಲ್ಲಿ ನಡೆಯಬೇಕಾಗಿದ್ದ ಸಭೆಯನ್ನು ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾಗೆ ಸಾರ್ವಜನಿರು ಪ್ರವೇಶಿಸದಂತೆ ಬ್ಯಾರಿಕೇಡ್ ಹಾಕಲಾಗಿದ್ದು, ಈ ಪ್ರದೇಶದಲ್ಲಿ ಸಂಪೂರ್ಣ ಸ್ಯಾನಿಟೈಸಿಂಗ್ ಕಾರ್ಯ ನಡೆದಿದೆ.

LEAVE A REPLY

Please enter your comment!
Please enter your name here