news-corona-positive-to-home-minister-amit-shah

ನವದೆಹಲಿ: ಕೇಂದ್ರ ಗೃಹ ಸಚಿವ, ಹಿಂದಿನ ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ಈ ಸಂಬಂಧ ಸ್ವತಃ ಅವರೇ ಟ್ವೀಟ್ ಮಾಡಿದ್ದು, ತನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಪರೀಕ್ಷೆಗೆ ಒಳಪಡುವಂತೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ ರಾಜ್ಯ ಸಚಿವೆ ಕಮಲ್ ರಾಣಿ ವರುಣ್ ಕೊರೋನಾಗೆ ಬಲಿ !

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೋನಾದ ಪ್ರಾರಂಬಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದು, ಇದರಲ್ಲಿ ಪೊಸಿಟಿವ್ ಬಂದಿದೆ. ನನ್ನ ಆರೋಗ್ಯವು ಉತ್ತಮವಾಗಿದೆ ಆದರೆ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಜನರ ಸಮಪರ್ಕದಿಂದ ಪ್ರತ್ಯೇಕವಾಗಿರಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here