coronavirus-in-karnataka-infection-numbers-crossed-50-thousand-mark-346-deaths-due-to-covid-19

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಬಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಇಂದು ಒಂದೇ ದಿನದಲ್ಲಿ 50,112 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಕರ್ನಾಟಕದಲ್ಲಿ ಸಾರ್ವಕಾಲಿಕ ದಾಖಲೆಯನ್ನು ಮಾಡಿದೆ.

ರಾಜ್ಯದಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬರುತ್ತಿದ್ದು, ಇದು ಇಲ್ಲಿಯವರೆಗೆ ದಾಖಲಾದ ಸೋಂಕಿತರ ಗರಿಷ್ಠ ಸಂಖ್ಯೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಇಂದು 346 ಜನರು ಸೋಂಕಿಗೆ ಪ್ರಾಣತೆತ್ತಿದ್ದಾರೆ.

ರಾಜ್ಯದ ರಾಜಧಾನಿ ಬೆಂಗಳೂರು ಒಂದರಲ್ಲೇ 23,106 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಇದಲ್ಲದೆ ರೋಗದ ತೀವ್ರತೆಗೆ ತುತ್ತಾಗಿ ಬೆಂಗಳೂರು ಒಂದರಲ್ಲೇ 161 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇವೆಲ್ಲವುಗಳ ಜೊತೆಗೆ 11,343 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿ

ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಕೋವಿಡ್ -19 ಪಾಸಿಟಿವ್ ವರದಿಗಳ ಸಂಖ್ಯೆಯನ್ನು ವಿವರವಾಗಿ ನೋಡುವುದಾದರೆ ಬೆಂಗಳೂರು ನಗರ 23106, ಬಾಗಲಕೋಟೆ 719, ಬಳ್ಳಾರಿ 927, ಬೆಂಗಳೂರು ಗ್ರಾಮಾಂತರ 1033, ಬೀದರ್ 482, ಚಾಮರಾಜನಗರ 542, ಚಿಕ್ಕಬಳ್ಳಾಪುರ 830, ಚಿಕ್ಕಮಂಗಳೂರು 1009, ಚಿತ್ರದುರ್ಗ 152, ದಕ್ಷಿಣ ಕನ್ನಡ 1529, ದಾವಣಗೆರೆ 548, ಧಾರವಾಡ 1030, ಗದಗ 189, ಹಾಸನ 1604, ಹಾವೇರಿ 224, ಕಲಬುರಗಿ 1097, ಕೊಡಗು 768, ಕೋಲಾರ 1115, ಕೊಪ್ಪಳ 182, ಮಂಡ್ಯ 1621, ಮೈಸೂರು 2790, ರಾಯಚೂರು 427, ರಾಮನಗರ 475, ಶಿವಮೊಗ್ಗ 702, ತುಮಕೂರು 2335, ಉಡುಪಿ 1655, ಉತ್ತರ ಕನ್ನಡ 849, ವಿಜಯಪುರ 513 ಮತ್ತು ಯಾದಗಿರಿಯಲ್ಲಿ 739 ಪ್ರಕರಣಗಳು ವರಿದಿಯಾಗಿವೆ.

ರಾಜ್ಯದಲ್ಲಿ ಇಲ್ಲಿಯವರೆಗೆ 17,41,046 ಕೊರೋನಾ ಪಾಸಿಟಿವ್ ಪ್ರಖರಣಗಳು ಪತ್ತೆಯಾಗಿದ್ದು, ಇದರಲ್ಲಿ 12,36,854 ಜನರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದ 16,884 ಜನರು ಕೋವಿಡ್ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ 4,87,288 ಜನರು ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here