ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೊರೊನಾ ಸೋಂಕು ಇರುವುದು ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ಕೊರೊನಾ ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿ ಇದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನತಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿರಿ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಡ
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020