ರಾಜ್ಯದಲ್ಲಿ ಇಂದು ಕೊರೋನಾಗೆ 476 ಬಲಿ, 24,214 ಜನರಿಗೆ ಕೊರೋನಾ ಪಾಸಿಟಿವ್

covid-19-karnataka-records-24214-new-cases-and-476-deaths

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತನ್ನ ಸವಾರಿಯನ್ನು ಮುಂದುವರೆಸಿದ್ದು, ಕಳೆದ 24 ಗಂಟೆಗಳಲ್ಲಿ 24,214 ಹೊಸ ಕೋವಿಡ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಇಲ್ಲಿಯವರೆಗೆ ದಾಖಲಾದ ಒಟ್ಟು ಸೋಂಕಿತರ ಸಂಖ್ಯೆ 25,23,998 ಕ್ಕೆ ಏರಿಕೆಯಾಗಿದೆ. ಇದಲ್ಲದೆ ಒಂದೇ ದಿನ 476 ಜನ ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 27,405 ಕ್ಕೆ ತಲುಪಿದೆ.

ಕೊರೋನಾ ಹೊಸ ಪ್ರಕರಣಗಳ ನಡುವೆ ಗುಣಮುಖರಾದವರ ಸಂಖ್ಯೆಯನ್ನು ನೋಡಿದಾಗ ಸ್ವಲ್ಪಮಟ್ಟಿನ ಸಮಾಧಾನ ಉಂಟಾಗುತ್ತದೆ. ಇಂದು ರಾಜ್ಯದಲ್ಲಿ 31,459 ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 20,94,369 ಕ್ಕೆ ಏರಿಕೆಯನ್ನು ಕಂಡಿದೆ. ಸದ್ಯ ರಾಜ್ಯದಲ್ಲಿ 4,02,203 ಸಕ್ರಿಯ ಕೊರೋನಾ ಪಾಸಿಟಿವ್ ಪ್ರಕರಣಗಳು ಇದ್ದು, ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ 24 ಗಂಟೆಗಳಲ್ಲಿ 5949 ಪ್ರಕರಣಗಳು ಪತ್ತೆಯಾಗಿದ್ದು, 273 ಜನರು ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿನಿಂದ ಇಂದು 6643 ಜನರು ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ. ಇದಲ್ಲದೆ ನಗರದಲ್ಲಿ 2,06,390 ಸಕ್ರಿಯ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ತಿಳಿಸಿದೆ.

ಇದನ್ನೂ ಓದಿರಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ: ವಾರದಲ್ಲಿ ನಾಲ್ಕು ದಿನ ಅವಕಾಶ, ವಿವರ ನೋಡಿ.

ಜಿಲ್ಲಾವಾರು ಸಂಪೂರ್ಣ ಮಾಹಿತಿ :
ಇನ್ನು ಜಿಲ್ಲೆಗಳಲ್ಲಿ ಸೋಂಕಿನ ಸಂಖ್ಯೆಯನ್ನು ನೋಡುವುದಾದರೆ ಬಾಗಲಕೋಟೆ 214, ಬಳ್ಳಾರಿ 725, ಬೆಳಗಾವಿ 1147, ಬೆಂಗಳೂರು ಗ್ರಾಮಾಂತರ 623, ಬೆಂಗಳೂರು ನಗರ 5949, ಬೀದರ್ 60, ಚಾಮರಾಜನಗರ 380, ಚಿಕ್ಕಬಳ್ಳಾಪುರ 238, ಚಿಕ್ಕಮಗಳೂರು 715, ಚಿತ್ರದುರ್ಗ 710, ದಕ್ಷಿಣ ಕನ್ನಡ 555, ದಾವಣಗೆರೆ 806, ಧಾರವಾಡ 678, ಗದಗ 370, ಹಾಸನ 1505, ಹಾವೇರಿ 159, ಕಲಬುರಗಿ 153, ಕೊಡಗು 337, ಕೋಲಾರ 591, ಕೊಪ್ಪಳ 495, ಮಂಡ್ಯ 755, ಮೈಸೂರು 2240, ರಾಯಚೂರು 445, ರಾಮನಗರ 263, ಶಿವಮೊಗ್ಗ 822, ತುಮಕೂರು 1219, ಉಡುಪಿ 905, ಉತ್ತರ ಕನ್ನಡ 659, ವಿಜಯಪುರ 306, ಯಾದಗಿರಿ 190 ಪ್ರಕರಣಗಳು ದಾಖಲಾಗಿದೆ.

LEAVE A REPLY

Please enter your comment!
Please enter your name here