pu-exam-results-by-july-end-sslc-exam-results-by-august-says-suresh-kumar

ಬೆಂಗಳೂರು: ಅಕ್ಟೋಬರ್ 5 ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವ ಸುರೇಶ್  ಕುಮಾರ್ ಅವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ  ಹೋಮ್ ಐಸೋಲೇಷನ್ ಗೆ ಒಳಗಾಗಿದ್ದ ಸಚಿವರು ನಿನ್ನೆ ದಿಡೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿ ಪಾಸಿಟಿವ್ ಬಂದಿತ್ತು. ಈ ಕಾರಣದಿಂದಾಗಿ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಎಂದು ವೈದ್ಯರು ಸಲಹೆ ನೀಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದೆ ಕೋವಿಡ್ ೧೯ ದೃಢವಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿ ಇರುತ್ತೇನೆ. ಯಾವುದೇ ರೋಗಲಕ್ಷಣಗಳು ಕಂಡುಬರದ ಹಿನ್ನೆಲೆಯಲ್ಲಿ ಆತಂಕಗೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here