ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕರೋನಾ ಪಾಸಿಟಿವ್

covid-positive-for-druva-sarja-and-his-wife

ಬೆಂಗಳೂರು: ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡು ಚಿಂತೆಯಲ್ಲಿದ್ದ ಸರ್ಜಾ ಪ್ಯಾಮಿಲಿಗೆ ಮತ್ತೊಂದು ಆಘಾತ ಬಂದೊದಗಿದೆ. ನಟ ಧ್ರುವ ಸರ್ಜಾ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ.

ಸರ್ಜಾ ಪ್ಯಾಮಿಲಿಗೆ ಒಂದಿಲ್ಲಾ ಒಂದು ಸಂಕಷ್ಟ ಬರುತ್ತಲೇ ಇದೆ. ಸದ್ಯ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕರೋನಾ ಪಾಸಿಟಿವ್ ಬಂದಿದ್ದು, ಆರೋಗ್ಯದಲ್ಲಿ ಯಾವುದೇ ಆತಂಕ ಪಡುವ ಅಗತ್ಯ ವಿಲ್ಲ ಎಂದು ತಿಳಿದು ಬಂದಿದೆ. ಆದರೆ ಮುಂಜಾಗ್ರತಾ ಕ್ರಮವಾಗಿ ಇಬ್ಬರೂ ಆಸ್ಪತೆಯಲ್ಲಿ ಅಡ್ಮಿಟ್ ಆಗಿದ್ದಾರೆ ಎಂದು ತಿಳಿದು ಬರುತ್ತಿದೆ. ಈ ಸಂಬಂಧ ಟ್ವಿಟ್ ಮಾಡಿರುವ ಧ್ರುವ ಸರ್ಜಾ ಅವರು, “ನನ್ನ ಹೆಂಡತಿ ಮತ್ತು ನಾನು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ವರದಿ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇವೆ. ಶೀಗ್ರವೇ ಗುಣಮುಖರಾಗಿ ಬರುವ ವಿಶ್ವಾಸವಿದೆ. ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಚಿರಂಜೀವಿ ಸರ್ಜಾ ಅವರು ಮೃತಪಟ್ಟು ಒಂದು ತಿಂಗಳಾದ ಸಮಯದಲ್ಲಿ ಇವರ ಮನೆಯಲ್ಲಿ ಚಂದುಕಾ ಯಾಗವನ್ನು ಧ್ರುವ ಸರ್ಜಾ ಅವರೇ ಮುಂದೆ ನಿಂತು ಮಾಡಿಸಿದ್ದರು. ಇದರಿಂದಾಗಿ ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಆತಂಕ ಶುರುವಾಗಿದೆ ಎನ್ನಬಹುದು.

LEAVE A REPLY

Please enter your comment!
Please enter your name here