crpf-recruitment-2021-for-38-head-constable-posts

ಗೃಹ ಸಚಿವಾಲಯದ ಅಡಿಯಲ್ಲಿನ ಕೇಂದ್ರ ಮೀಸಲು ಪೊಲೀಸ್ ಪಡೆಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಸಿಆರ್‌ಪಿಎಫ್ ನಲ್ಲಿ ಒಟ್ಟು 38 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಹತೆ :

ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಂಟರ್‌ಮೀಡಿಯೇಟ್ ಅಥವಾ ಸಮನಾದ ವಿದ್ಯಾರ್ಹತೆಯ ಜೊತೆಗೆ ಇಂಗ್ಲೀಷ್ ಅಥವಾ ಹಿಂದಿ ಟೈಪಿಂಗ್ ಸ್ಕಿಲ್ ಜೊತೆಗೆ ದೈಹಿಕ ಮತ್ತು ಮೆಡಿಕಲ್ ಫಿಟ್‌ನೆಸ್ ಅನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ :

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಗರಿಷ್ಟ 25 ವರ್ಷ ವಯೋಮಿತಿ ಓಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ :

ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಇದನ್ನೂ ಓದಿರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಖಾಲಿಯಿರುವ 357 ಹೊಸ ನೇಮಕಾತಿಗೆ ಅಧಿಸೂಚನೆ ಪ್ರಕಟ

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24/09/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/10/2021

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯನ್ನು ಟೈಪಿಂಗ್ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೇಮಕಾತಿ ಅಧಿಸೂಚನೆ ಜೊತೆಗೆ ಇರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ. ನಂತರ ಅದರಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 15, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here