ಮುಂಬೈ: ಮುಂಬೈನ ಐಷಾರಾಮಿ ಹಡಗೊಂದರಲ್ಲಿ ಡ್ರಗ್ ಪಾರ್ಟಿ ಸಂಬಂಧ ಬಂಧಿತನಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ.
ಆರ್ಯನ್ ಖಾನ್ ಗೆ ಜಾಮೀನು ನೀಡುವಂತೆ ಮುಂಬೈನ ಎನ್ ಡಿ ಪಿ ಎಸ್ ವಿಶೇಷ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಸೇರಿದಂತೆ ಇನ್ನು ಮೂವರಿಗೆ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.
ಅಕ್ಟೋಬರ್ 3 ರಂದು ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿದ್ದ ಸಮಯದಲ್ಲಿ ಎ ಸಿ ಬಿಯಿಂದ ಬಂಧಿತನಾಗಿದ್ದ ಆರ್ಯನ್ ಖಾನ್ ಸದ್ಯ ಮುಂಬೈನ ಅರ್ಥೂರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
Follow us on:![]()