cyclone-nisarga-makes-landfall-near-maharashtra-alibaug

ಮುಂಬೈ (ಜೂನ್ 03): ನಿಸರ್ಗ ಚಂಡಮಾರುತ ಮಧ್ಯಾಹ್ನದ ವೇಳೆಗೆ ಮಹಾರಾಷ್ಟ್ರದ ಅಲಿಭಾಗ್ ಪ್ರದೇಶಕ್ಕೆ 120 ಕಿ.ಮೀ. ವೇಗದಲ್ಲಿ ಬಂದು ಅಪ್ಪಳಿಸಿದೆ. ಇದರ ಪರಿಣಾಮವಾಗಿ ಮುಂಬೈ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. 

ಚಂಡಮಾರುತದ ಪರಿಣಾಮ ಮಹಾರಾಷ್ಟ್ರದ ಹಲವೆಡೆ ಬಿರುಗಾಳಿ ಬೀಸುತ್ತಿದ್ದು, ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಹಲವು ಮನೆಗಳ ಮೇಲ್ಚಾವಣಿಗಳು ಹಾರಿ ಹೋಗಿ ಅನಾಹುತಗಳು ಸೃಷ್ಟಿಯಾಗಿವೆ. ಮಹಾರಾಷ್ಟ್ರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಮನೆಯಿಂದ ಹೊರಬರದಂತೆ ಆದೇಶವನ್ನು ಹೊರಡಿಸಲಾಗಿದೆ. 

ನಿಸರ್ಗ ಚಂಡಮಾರುತದ ಅಪಾಯದಿಂದ ಪಾರಾಗಲು ಸಮುದ್ರ ತೀರದ ಮತ್ತು ಮುಬೈ ನಗರದ ತಗ್ಗು ಪ್ರದೇಶದ ಸುಮಾರು 40 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಅಲ್ಲದೇ 30 ಏನ್.ಡಿ.ಆರ್.ಎಫ್. ಪಡೆಗಳು ವಿಪತ್ತು ನಿರ್ವಹಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. 

ನಿಸರ್ಗ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ದಿಯು ಹಾಗೂ ದಮನ್ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಬಿರುಗಾಳಿ ಮತ್ತು ಮಳೆ ಉಂಟಾಗುತ್ತಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here