cyclone-tauktae-to-hit-karnataka-kerala-goa-maharashtra-on-may-16-karnataka-rains

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಗಾಳಿ ಮತ್ತು ಸಿಡಿಲಿನ ಅಬ್ಬರ ಜೋರಾಗಿದೆ. ಆದರೆ ಈಗ ಮೇ 16 ರಂದು ಅರಬ್ಬಿ ಸಮುದ್ರದಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಪರಿಣಾಮವಾಗಿ ಕರ್ನಾಟಕ, ತಮಿಳುನಾಡು ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಈ ಚಂಡಮಾರುತಕ್ಕೆ ತೌಕ್ತೆ ಚಂಡಮಾರುತ ಎಂದು ಹೆಸರಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಚಂಡಮಾರುತದ ಪರಿಣಾಮವಾಗಿ ಮೇ 16 ರಂದು ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತಕ್ಕೆ ಮಯನ್ಮಾರ್ ಹೆಸರಿಸಿದ್ದು, ಇದರ ಅಬ್ಬರ ಲಕ್ಷದ್ವೀಪ, ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಚಂಡಮಾರುತದ ಅಬ್ಬರ ಜೋರಾಗಿ ಇರಲಿದೆ.

LEAVE A REPLY

Please enter your comment!
Please enter your name here