decembar-gas-cylinder-rate-hike

ನವದೆಹಲಿ: ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಿಂದ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ.

ದೇಶದ ಅತಿದೊಡ್ಡ ಸರಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (Indian Oil Corporation) 19 ಕೆ.ಜಿ.ಯ ವಾಣಿಜ್ಯ ಸಿಲೆಂಡರಿನ ಬೆಲೆಯನ್ನು 103.50 ರೂ. ಗೆ ಹೆಚ್ಚಿಸಿದೆ. ಈ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ವಾಣಿಜ್ಯ ಸಿಲೆಂಡರಿನ ಬೆಲೆ 2101 ರೂ ಗೆ ಹೆಚ್ಚಳವಾದಂತಾಗಿದೆ.

ಗ್ರಹಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಸ್ಥಿರ

ಸದ್ಯ ಗೃಹ ಬಳಕೆ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗದಿರುವುದು ಸಮಾಧಾನಕರ ಸಂಗತಿಯಾಗಿದೆ. ಈ ಮೂಲಕ ದೆಹಲಿಯಲ್ಲಿ ಗೃಹ ಬಳಕೆ ಸಿಲಿಂಡರ್ ಬೆಲೆ ರೂ.899.50 ಗೆ ಸ್ಥಿರವಾಗಿದೆ. ಆದರೆ ವಾಣಿಜ್ಯ ಸಿಲೆಂಡರಿನ ಬೆಲೆ ಹೆಚ್ಚಳದಿಂದಾಗಿ ಹೋಟೆಲ್ ಆಹಾರದ ಬೆಲೆಯಲ್ಲಿ ಹೆಚ್ಚಳ ಆಗುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here