ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನದ ಕುರಿತಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಲೋಕಸಭೆಗೆ ಮಾಹಿತಿ ನೀಡಿದರು. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗು ಇತರ ಸೇನಾ ಸಿಬ್ಬಂದಿಗಳಿಗೆ ಉಭಯ ಸದನಗಳಲ್ಲಿ ಸಂತಾಪ ಸೂಚಿಸಲಾಯಿತು. ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಈ ತನಿಖಾ ತಂಡ ಬುಧವಾರವೇ ವೆಲಿಂಗ್ಟನ್ ತಲುಪಿ ತನಿಖೆ ಆರಂಭಿಸಿದೆ ಎಂದು ರಕ್ಷಣಾ ಸಚಿವರು ಮಾಹಿತಿ ನೀಡಿದರು.
ಇದನ್ನೂ ಓದಿರಿ: ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ದುರಂತ: ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ