ಲೇಹ್ ಗಡಿಭಾಗಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ..

Defence minister Rajnath Singh in Leh amid India-China LAC stand-off

ಲಡಾಖ್: ಭಾರತ-ಚೀನಾ ಗಡಿಯಲ್ಲಿ ಬಿಕ್ಕಟ್ಟಿನ ವಾತಾವರಣ ಉಂಟಾಗಿದ್ದು, ಈ ಸಂಬಂಧ ಇಂದು ಲೇಹ್ ಸೇನಾ ಕ್ಯಾಂಪ್ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೇಟಿ ನೀಡಿದ್ದಾರೆ. ರಕ್ಷಣಾ ಸಚಿವರು ಲೇಹ್, ಜಮ್ಮು ಮತ್ತು ಕಾಶ್ಮೀರದ ಪ್ರದೇಶಗಳ ಎರಡು ದಿನಗಳ ಪ್ರವಾಸವನ್ನು ಕೈಗೊಂಡಿದ್ದಾರೆ.

ಜಾಹಿರಾತು

ಭಾರತ-ಚೀನಾ ಗಡಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಸಮಯದಲ್ಲಿ ಅಲ್ಲಿನ ಭದ್ರತೆ ಮತ್ತು ಸುರಕ್ಷತೆಗಾಗಿ ಕೈಗೊಂಡ ಕ್ರಮಗಳ ಕುರಿತು ಅರಿಯುವ ದೃಷ್ಟಿಯಿಂದ ರಾಜನಾಥ್ ಸಿಂಗ್ ಅವರು ಬೇಟಿ ನೀಡಿದ್ದಾರೆ. ಇವರ ಜೊತೆಗೆ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಎಂ ಎಂ ನರವಣೆ ಸಹ ಆಗಮಿಸಿದ್ದಾರೆ.

ಇದೇ ಸಮಯದಲ್ಲಿ ಸೇನಾ ಪಡೆಗಳು, ಗಡಿ ಪ್ರದೇಶದಲ್ಲಿನ ರಕ್ಷಣಾ ಕಾರಯಾಚರಣೆಯ ಪ್ರಾತ್ಯಕ್ಷಿಕೆಯನ್ನು ನಡೆಸಿದರು. ಈ ಸಮಯದಲ್ಲಿ ರಕ್ಷಣಾ ಪಡೆಗಳು ಬಳಕೆ ಮಾಡುವ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ರಾಜನಾಥ್ ಸಿಂಗ್ ಅವರು ಪರಿಶೀಲನೆ ನಡೆಸಿದರು.

ಕಳೆದ ಬಾರಿ ರಕ್ಷಣಾ ಸಚಿವರು ಲಡಾಖ್ ಗಡಿ ಭಾಗಕ್ಕೆ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತಾದರೂ ಕೊನೆಯ ಕ್ಷಣದಲ್ಲಿ ರಾಜನಾಥ್ ಸಿಂಗ್ ಬೇಟಿ ರದ್ದಾಗಿತ್ತು. ಇದಕ್ಕೆ ಬದಲಾಗಿ ದೇಶದ ಪ್ರಧಾನಿಗಳೇ ಆಗಮಿಸಿ ಸೈನಿಕರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿದ್ದರು. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದನ್ನು ಈ ಸಮಯದಲ್ಲಿ ಸ್ಮರಿಸಬಹುದು.


ಜ್ಯೋತಿಷ್ಯ ಜಾಹಿರಾತು

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 9986554733  ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 998 6554733.

LEAVE A REPLY

Please enter your comment!
Please enter your name here