degree-exams-canceled-says-dcm-ashwath-narayana

ಬೆಂಗಳೂರು: ಕೊರೊನಾ ವೈರಸ್ ಪರಿಣಾಮವಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದ ಕಾರಣ ರಾಜ್ಯ ಸರಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಆದರೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನವನ್ನು ತೆಗೆದುಕೊಂಡಿದೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೊಂಡಿದೆ. 2019-20 ನೇ ಸಾಲಿನ ಎಂಜಿನಿಯರಿಂಗ್ ಸೇರಿ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯದ ತರಗತಿಗಳ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಈ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿಯಂತೆ ಸಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲಾಗುವುದು. ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ತಜ್ಞರು ಮತ್ತು  ಕುಲಪತಿಗಳ ಜೊತೆಯಲ್ಲಿ ಹಲವಾರು ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here