ಚೈನಾದಲ್ಲಿ ಕರೋನಾ (Covid-19) ಪ್ರಕರಣಗಳು ಉಲ್ಬಣಗೊಂಡಿದ್ದು, ಕಠಿಣ ಕೋವಿಡ್ ನಿಯಮ ಜಾರಿಗೊಳಿಸಲಾಗಿದೆ. ಈ ಲಾಕ್ ಡೌನ್ ನಿಂದ ಕಂಗೆಟ್ಟ ಜನ ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಹುಮಹಡಿ ಕಟ್ಟಡವೊಂದಕ್ಕೆ ಬೆಂಕಿ ಬಿದ್ದು, 10 ಜನ ಸಾವಿಗೀಡಾದ ನಂತರ ಈ ಪ್ರತಿಭಟನೆ ಕಾವು ಪಡೆದುಕೊಂಡಿದ್ದು, ಪ್ರಮುಖ ನಗರಗಳಲ್ಲಿ ಲಾಕ್ ಡೌನ್ ತೆರವಿಗೆ ಆಗ್ರಹ ಕೇಳಿಬಂದಿದೆ. ಶಾಂಘೈನ ನಿವಾಸಿಗಳು ಶನಿವಾರ ರಾತ್ರಿ ರಸ್ತೆಯಲ್ಲಿ ಜಮಾವಣೆಗೊಂಡು, ಮೇಣದ ಬತ್ತಿ ಹಚ್ಚಿ ʼಡೌನ್ ಕ್ಸಿ ಜಿನ್ಪಿಂಗ್’ (Down xi jinping) ಎಂದು ಆಕ್ರೋಶ ಹೊರಹಾಕಿದ್ದಾರೆ.
上海乌鲁木齐路 民众高喊
共产党 下台!
这是迄今为止最为激进的口号。 pic.twitter.com/ijP7lxnIgH— 李老师不是你老师 (@whyyoutouzhele) November 26, 2022
ಚೀನಾದಲ್ಲಿ ಕೋವಿಡ್ ಹೆಚ್ಚಳದಿಂದಾಗಿ ಶಾಂಘೈ ಸೇರಿದಂತೆ ಪ್ರಮುಖ ನಗರಗಳು ಲಾಕ್ ಆಗಿವೆ. ಈ ನಡುವೆ ಉರುಮ್ಕಿಯಲ್ಲಿನ ಬಹುಮಹಡಿ ಕಟ್ಟಡಕ್ಕೆ ಬೆಂಕಿ ಬಿದ್ದು 10 ಜನ ಮೃತಪಟ್ಟಿದ್ದರು. ಕಟ್ಟಡವು ಭಾಗಶಃ ಲಾಕ್ ಡೌನ್ ಆಗಿರುವುದರಿಂದ ನಿವಾಸಿಗಳು ಸಮಯಕ್ಕೆ ತಪ್ಪಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈ ಕುರಿತಂತೆ ದೇಶದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಇದನ್ನೂ ಓದಿ: Indian Navy Recruitment: ಭಾರತೀಯ ನೌಕಾಪಡೆಯಲ್ಲಿದೆ ಉದ್ಯೋಗ