ಜಕಾರ್ತ: ಇಂಡೋನೇಷ್ಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 162 ಕ್ಕೆ ಏರಿಕೆಯಾಗಿದೆ. ಸುಮಾರು 700 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ 5.6 ರಷ್ಟು ದಾಖಲಾಗಿದೆ.
ಭೂಕಂಪನದ ತೀವ್ರತೆಗೆ ಹಲವು ಮನೆಗಳು ಮತ್ತು ಕಟ್ಟಡಗಳು ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಹಾಕಿಕೊಂಡಿದ್ದಾರೆ. ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಯಲ್ಲಿ ತೊಡಗಿಕೊಂಡಿವೆ. ಆಸ್ಪತ್ರೆಗಳಲ್ಲಿ ಗಾಯಾಳುಗಳು ಎಲ್ಲೆಂದರಲ್ಲಿ ತುಂಬಿಹೋಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಿಯಂಜೂರ್ ಸಮೀಪ ಭೂಕಂಪನ ಉಂಟಾಗಿದ್ದು, ಜನವಸತಿ ಪ್ರದೇಶ ಮತ್ತು ಶಾಲೆಗಳು ಕುಸಿದು ಬಿದ್ದಿವೆ. ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ಸಾವು-ನೋವು, ಹಾನಿ ಪ್ರಮಾಣದ ಕುರಿತು ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆಯ ಮುಖ್ಯಸ್ಥೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ: Satyendar Jain: ಮಸಾಜ್ ಸೇವೆ ನೀಡಿದ್ದು ಫಿಸಿಯೋ ಅಲ್ಲ, ಕೈದಿ; ತಿಹಾರ್ ಜೈಲಿನ ಮೂಲಗಳ ಹೇಳಿಕೆ