2nd-puc-results-tentatively-on-july20-clarifies-minister-suresh-kumar

ಬೆಂಗಳೂರು: ಆನ್ಲೈನ್ ಶಿಕ್ಷಣದಿಂದ ವಾಚಿತರಾದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗ್ರಾಮಪಂಚಾಯತ್ ಗ್ರಂಥಾಲಯಗಳಲ್ಲಿ ಕಲಿಕೆಗೆ ಅವಕಾಶ ಕಲ್ಪಿಸಿಕೊಡಲು ಸರಕಾರ ವ್ಯವಸ್ಥೆಯನ್ನು ಮಾಡಿಕೊಡಲಿದೆ.

ಈ ಕುರಿತು ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು, ಸದ್ಯದ ಪರಿಸ್ಥಿತಿಯಲ್ಲಿ ಶಿಕ್ಷಣದ ಕಲಿಕೆಗೆ ಡಿಜಿಟಲ್ ಮಾಧ್ಯಮವನ್ನು ಅವಲಂಭಿಸಬೇಕಾಗಿದೆ. ಇಂತಹ ಸಮಯದಲ್ಲಿ ದೂರದರ್ಶನ, ಮೊಬೈಲ್ ಇಲ್ಲದೆ ಆನ್ ಲೈನ್ ಶಿಕ್ಷಣದಿಂದ ವಂಚಿತರಾದ ಗ್ರಾಮೀಣ ಭಾಗದ ಮಕ್ಕಳ ನೆರವಿಗೆ ಸರಕಾರ ಮುಂದಾಗಲಿದೆ. ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿರುವ ಗ್ರಂಥಾಲಯಗಳಲ್ಲಿ ಕಲಿಕಾ ಸಲಕರಣೆಗಳನ್ನು ಅಳವಡಿಸಿ, ಆನ್ ಲೈನ್ ಶಿಕ್ಷಣ ವಂಚಿತರಿಗೆ ನೆರವಾಗಲಿ ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿರಿ: SSLC Exam 2021: ವಿದ್ಯಾರ್ಥಿಗಳಿಗೆ ಕೆಎಸ್‌ಆರ್ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಾವಕಾಶ

ರಾಜ್ಯದಲ್ಲಿ ಸುಮಾರು 5766 ಗ್ರಂಥಾಲಯಗಳಿದ್ದು, ಅವುಗಳನ್ನು ಬಳಸಿಕೊಂಡು ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಒದಗಿಸುವುದು ಸರಕಾರದ ಚಿಂತನೆಯಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದ ಹಲವಾರು ಮಕ್ಕಳು ಅನುಭವಿಸುವ ನೆಟ್ವರ್ಕ್ ಸಮಸ್ಯೆಗೆ ಕೊಂಚ ಪರಿಹಾರವೂ ದೊರೆಯಬಹುದು ಎಂದು ಚಿಂತಿಸಲಾಗಿದೆ.

ಇದನ್ನೂ ಓದಿರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here