election-commission-announces-karnataka-bypoll-2021-dates

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯಬೇಕಿದ್ದ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಚುನಾವಣೆ ಘೋಷಣೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ರಾಜ್ಯದ ವಿಧಾನಸಭಾ ಕ್ಷೇತ್ರವಾದ ಬಸವಕಲ್ಯಾಣದಲ್ಲಿ ಕಳೆದ ಬಾರಿ ಬಿ. ನಾರಾಯಣರಾವ್ ಆಯ್ಕೆಯಾಗಿದ್ದರು. ದುರದೃಷ್ಟವಶಾತ್ ಕೋರೋನಾ ಸೋಂಕಿಗೆ ತುತ್ತಾಗಿ ಅವರು ಕೊನೆಯುಸಿರೆಳೆದರು. ಅವರ ನಿಧನದಿಂದಾಗಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಕಾಂಗ್ರೆಸ್ ನ ಪ್ರತಾಪ್ ಗೌಡ ಪಾಟೀಲ್ ಆಯ್ಕೆಯಾಗಿದ್ದರು. ಆದರೆ ನಂತರದ ರಾಜಕೀಯ ಬೆಳವಣಿಗೆಗಳಿಂದಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಇದರಿಂದಾಗಿ ಈ ಕ್ಷೇತ್ರ ತೆರವಾಗಿತ್ತು.

ಇದನ್ನೂ ಓದಿರಿ: ಕಂಟೋನ್ಮೆಂಟ್ ಬೋರ್ಡ್ ಬೆಳಗಾವಿ ವಿವಿಧ ಹುದ್ದೆಗಳ‌ ನೇಮಕಾತಿ

ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಂಸದ ಸುರೇಶ ಅಂಗಡಿ ಆಯ್ಕೆಯಾಗಿದ್ದರು. ಆದರೆ ಅವರು ಸಹ ಕರೋನಾ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದರು.

ರಾಜ್ಯದಲ್ಲಿ ನಡೆಯಲಿರುವ ಈ ಮೂರೂ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಮಾರ್ಚ್ 30 ಕೊನೆಯ ದಿನವಾಗಿದ್ದು, ಮಾರ್ಚ್ 31 ರಂದು ನಾಮಪತ್ರ ಪರಿಶೀಲಿಲನೆ ನಡೆಯಲಿದೆ. ಮೇ ಎರಡನೆಯ ತಾರೀಕಿನಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here