electricity-tariff-up-by-40-paise-in-karnataka

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ. ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವನೆಯ ಮೇರೆಗೆ ಹೆಚ್ಚಳ ಮಾಡಲಾಗಿದೆ.

ಹಲವು ದಿನಗಳ ಹಿಂದೆಯೇ ಸರಕಾರಕ್ಕೆ ಎಸ್ಕಾಂಗಳಿಂದ ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದ್ದು, ನವೆಂಬರ್ 1 ರಿಂದಲೇ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಗೆ ತರುವಂತೆ ಆದೇಶ ಹೊರಡಿಸಿದೆ. ಈ ಆದೇಶದ ಅನ್ವಯ ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಳ ಆಗಲಿದೆ.

ಇದನ್ನೂ ಓದಿರಿ: ಕೋವಿಡ್ ನಿಯಂತ್ರಣದಲ್ಲಿ ರಾಜ್ಯ ಸರಕಾರ ತೆಗೆದುಕೊಂಡ ಕ್ರಮಕ್ಕೆ ಕೇಂದ್ರದ ಮೆಚ್ಚುಗೆ

ಕಳೆದ ಮಾರ್ಚ್ ತಿಂಗಳಿನಿಂದಲೇ ವಿದ್ಯುತ್ ದರದಲ್ಲಿ ಹೆಚ್ಚಳವಾಗಬೇಕಿತ್ತು. ಆದರೆ ಕೊರೊನಾ ಸಾಂಕ್ರಾಮಿಕದಿಂದ ತಡೆಹಿಡಿಯಲಾಗಿದ್ದ ದರ ಹೆಚ್ಚಳ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದಲ್ಲದೆ ರಾಜ್ಯದ ಉಪಚುನಾವಣೆಗಳು ಸಹ ಸದ್ಯ ಮುಗಿದಿದ್ದು, ರಾಜ್ಯಸರ್ಕಾರ ದರ ಹೆಚ್ಚಳದ ಆದೇಶಕ್ಕೆ ಸಹಿ ಹಾಕಿದೆ.

LEAVE A REPLY

Please enter your comment!
Please enter your name here