ಬೆಂಗಳೂರು: ಸರಿಯಾದ ವೇತನ, ವೇತನದಲ್ಲಿ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸರಕಾರ ಆಶಾ ಕಾರ್ಯಕರ್ತೆಯರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ. ಈ ಹಿಂದೆ ಹಲವಾರು ಬಾರಿ ಪ್ರತಿಭಟನೆ ನಡೆಸಿದಾಗ ಕೊಟ್ಟ ಭರವಸೆಯನ್ನು ಇದುವರೆಗೂ ಈಡೇರಿಸಿಲ್ಲ. ಅಲ್ಲದೆ ಈ ಕರೋನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ. ಮಾಸಿಕ ಕನಿಷ್ಠ 12 ಸಾವಿರ ವೇತನ ನಿಗದಿ ಮಾಡುವಂತೆ ಮತ್ತು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 23 ರಂದು ಬೆಂಗಳೂರಿನ ಪ್ರಿಡಂ ಪಾರ್ಕನಲ್ಲಿ  ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ ನಾಗಲಕ್ಷ್ಮಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here