ರೈತರ ಅಹೋರಾತ್ರಿ ಧರಣಿ । farmers-protest-infront-of-cm-bommai-house-tomorrow

ಬೆಂಗಳೂರು: ಕಬ್ಬಿಗೆ ನ್ಯಾಯ ಸಮ್ಮತ ಬೆಂಬಲ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ಮೆನೆಯ ಮುಂದೆ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ಕಬ್ಬು ಬೆಳೆಗಾರರು ಸಮಸ್ಯೆ ಪರಿಹರಿಸುವಂತೆ ನಾಲ್ಕು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಬೂಬು ಹೇಳುತ್ತಾ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಾ, ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ರಾಜ್ಯದ 30 ಲಕ್ಷ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಗಂಭೀರ ಪ್ರಯತ್ನ ನಡೆಸುತ್ತಿಲ್ಲ. ಹಲವು ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಿರಂತರ ಹೋರಾಟ ನಡೆಸುತ್ತಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಬ್ಬು ಕಟಾವು ಸಾಗಾಣಿಕೆ ವೆಚ್ಚವನ್ನು ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ಕಡಿತಗೊಳಿಸಬೇಕು. ಬ್ಯಾಂಕುಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್‌ ಸ್ಕೋರ್‌ ಪರಿಗಣಿಸಬಾರದು, ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರುವವರೆಗೂ ಅಹೋರಾತ್ರಿ ಧರಣಿ ನಡೆಸುವುದಾಗಿ ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದ ಮೋದಿ ಸರಕಾರ – ಮಲ್ಲಿಕಾರ್ಜುನ್ ಖರ್ಗೆ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here