ವಿಶ್ವದ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ಸೇರಿ 6 ಭಾರತೀಯರು

finance-minister-sitharaman-5-other-indians-among-forbes-worlds-100-most-powerful-women

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಯೋಕಾನ್ ಕಾರ್ಯನಿರ್ವಾಹಕ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಮತ್ತು ನೈಕಾ ಸಂಸ್ಥಾಪಕ ಫಲ್ಗುಣಿ ನಾಯರ್ ಸೇರಿದಂತೆ ಆರು ಭಾರತೀಯರು ಫೋರ್ಬ್ಸ್‌ ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ ವಾರ್ಷಿಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಫೋರ್ಬ್ಸ್‌ ಸಂಸ್ಥೆ ವಿಶ್ವದ ಪ್ರಭಾವಿ 100 ಮಹಿಳೆಯರ ಪಟ್ಟಿಯನ್ನು ಪ್ರತಿವರ್ಷ ಬಿಡುಗಡೆ ಮಾಡುತ್ತದೆ. ಅದರಂತೆಯೇ ಈ ಬಾರಿಯೂ ಬಹಿರಂಗ ಪಡಿಸಿದ್ದು, ಭಾರತೀಯ ಆರು ಮಹಿಳೆಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ನಾಲ್ಕನೆಯ ಬಾರಿಗೆ ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇವರು ಈ ಬರಿ ವಿಷವಾದ ಪಟ್ಟಿಯಲ್ಲಿ 36 ನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿರಿ: ದೆಹಲಿಯಲ್ಲಿ ಕೇಜ್ರಿವಾಲ್ ಮ್ಯಾಜಿಕ್; 15 ವರ್ಷದ ಬಿಜೆಪಿ ಹಿಡಿತ ಅಂತ್ಯ

ಎಚ್‌ಸಿಎಲ್ ಕಾರ್ಪೊರೇಶನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಶನಿ ನಾಡರ್ ಮಲ್ಹೋತ್ರಾ 53 ನೇ ಸ್ಥಾನ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್-ಶಾ 72 ನೇ ಸ್ಥಾನ, ನೈಕಾ ಸಂಸ್ಥಾಪಕಿ ಫಲ್ಗುಣಿ ನಾಯರ್ 88 ನೇ ಸ್ಥಾನ, ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ 54 ನೇ ಸ್ಥಾನ, ಮತ್ತು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಅಧ್ಯಕ್ಷೆ ಸೋಮಾ ಮೊಂಡಲ್ 67 ನೇ ಸ್ಥಾನ ಸ್ಥಾನ ಪಡೆದಿದ್ದಾರೆ.

ಉಕ್ರೇನ್ ಯುದ್ಧದ ಸಮಯದಲ್ಲಿ ಅವರ ನಾಯಕತ್ವಕ್ಕಾಗಿ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿಭಾಯಿಸಿದ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ ಫೋರ್ಬ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಇನ್ನು ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಅಧ್ಯಕ್ಷೆ ಕ್ರಿಸ್ಟೀನ್ ಲಾಗಾರ್ಡ್ ಎರಡನೇ ಸ್ಥಾನದಲ್ಲಿದ್ದು, ಮೂರನೇ ಸ್ಥಾನವನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿರಿ: ಗುಜರಾತಿನಲ್ಲಿ ಬಿಜೆಪಿ ಮುನ್ನಡೆ; ಹಿಮಾಚಲ ಪ್ರದೇಶದಲ್ಲಿ ನಿಕಟ ಪೈಪೋಟಿ

LEAVE A REPLY

Please enter your comment!
Please enter your name here