former-cm-siddaramaiah-will-discharge-from-hospital-tomorrow

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋವಿಡ್ ಸೋಂಕಿಗೆ ಒಳಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಸದ್ಯ ಅವರಿಗೆ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ಬಂದಿರುವ ಹಿನ್ನೆಲೆಯಲ್ಲಿ ನಾಳೆ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ ಮಂಗಳವಾರ ಸೋಂಕಿಗೆ ತುತ್ತಾಗಿ ಮಣಿಪಾಲ್ ಆಸ್ಪತ್ರೆಯನ್ನು ಸೇರಿದ್ದ ಸಿದ್ದರಾಮಯ್ಯ ಅವರಿಗೆ ಬೇಗ ಗುಣಮುಖರಾಗಿ ಬರಲೆಂದು ರಾಜಕಾರಣಿಗಳು ಮತ್ತು ಅಭಿಮಾನಿಗಳು ಹಾರಿಸಿದ್ದರು. ಅದಲ್ಲದೆ ತಮಗೆ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ, ಆದರೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದರು. ಆದರೆ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿರಿ: ನಟ ವಿಜಯ ರಾಘವೇಂದ್ರ ಕಾರ್ ಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ

ನಿನ್ನೆ ಎರಡನೇ ಬಾರಿಗೆ ಗಂಟಲು ದ್ರವ ಹಾಗು ರಕ್ತ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಆರಂಭದಲ್ಲಿ ಎರಡುದಿನಗಳ ಕಾಲ ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿತ್ತು, ಆದರೆ ಉಳಿದಂತೆ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿರಲಿಲ್ಲ. ಈಗ ಅವರು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಪ್ರಣಬ್ ಮುಖರ್ಜಿ ಆರೋಗ್ಯ ಇನ್ನಷ್ಟು ಗಂಭೀರ; ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಮಾಜಿ ರಾಷ್ಟ್ರಪತಿ

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here