ನವದೆಹಲಿ : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಮದ್ಯಾಹ್ನ ಅವರನ್ನು ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರ ಚಿಕಿತ್ಸೆಗೂ ಮುನ್ನ ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.
ಈ ಕುರಿತು ಪ್ರಣಬ್ ಮುಖರ್ಜಿ ಅವರೇ ಟ್ವೀಟ್ ಮಾಡಿ, ಆಸ್ಪತ್ರೆಗೆ ಬೇಟಿ ನೀಡಿದ ವೇಳೆ ವೈರಸ್ ಪರೀಕ್ಷೆ ನಡೆಸಿದಾಗ ಕೊರೊನಾ ಇರುವುದು ದೃಡಪಟ್ಟಿದೆ. ಕಳೆದ ಒಂದು ವಾರದಲ್ಲಿ ನನ್ನನ್ನು ಬೇಟಿ ಮಾಡಿದ ಪ್ರತಿಯೊಬ್ಬರೂ ಐಸೊಲೆಶನ್ ಆಗುವ ಜೊತೆಗೆ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದರು.
ಇದನ್ನೂ ಓದಿರಿ: ವರ್ಷಾಂತ್ಯಕ್ಕೆ ಭಾರತದ ಕೊರೊನಾ ಲಸಿಕೆ ಲಭ್ಯ..!
ಶಸ್ತ್ರ ಚಿಕಿತ್ಸೆ ನಡೆಸುವುದು ಅವಶ್ಯವಾಗಿದ್ದರಿಂದ ನಿನ್ನೆ ಯಶಸ್ವಿಯಾಗಿ ಮಾಡಲಾಗಿತ್ತು. ಆದರೆ ಯಶಸ್ವಿ ಚಿಕಿತ್ಸೆಯ ನಂತರವೂ ಅವರು ಚೇತರಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಅವರನ್ನು ವೆಂಟಿಲೇಟರ್ ಸಪೋರ್ಟ್ ನಲ್ಲಿಯೇ ಇಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
1935 ರ ಡಿಸೆಂಬರ್ 11 ರಂದು ಜನಿಸಿದ್ದ ಪ್ರಣಬ್ ಮುಖರ್ಜಿ ತಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್ ನಲ್ಲಿ ಪ್ರಾರಂಭಿಸಿದರು. 84 ವರ್ಷದ ಇವರು ಅವರು 2012 ರಿಂದ 2017 ರವರೆಗೆ ದೇಶದ ರಾಷ್ಟ್ರಪತಿಯಾಗಿದ್ದರು. ರಾಷ್ಟ್ರಪತಿ ರಾಮನಾಥ್ ಕೊವಿಂದ್, ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವಾರು ನಾಯಕರು ಅವರು ಆರೋಗ್ಯವಾಗಿ ಹೊರಬರಲಿ ಎಂದು ಹಾರೈಸಿದ್ದಾರೆ.