ನವದೆಹಲಿ: ಮಾಜಿ ಕೇಂದ್ರ ಸಚಿವ ಮತ್ತು ಆರ್‌ಜೆಡಿ ನಾಯಕ ಶರದ್ ಯಾದವ್ ಅವರು ಗುರುವಾರ ವಯೋಸಹಜ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಅವರ ಮಗಳು ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡುದ್ದಾರೆ.
ಇತ್ತೀಚಿಗೆ ಅವರ ಆರೋಗ್ಯ ಹದಗೆಟ್ಟಿತ್ತು, ಈ ಕಾರಣದಿಂದಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆಯ ವೈದ್ಯರ ಪ್ರಯತ್ನದ ಹೊರತಾಗಿಯೂ ಶರದ್ ಯಾದವ್ ಅವರನ್ನು ಉಳಿಸಿಕೊಳ್ಳವು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
Former Union Minister Sharad Yadav passes away, confirms his daughter through a Facebook post. pic.twitter.com/p56lUeqz7B
— ANI (@ANI) January 12, 2023
ಶರದ್ ಯಾದವ್ ಅವರು 1999 ಮತ್ತು 2004 ರ ನಡುವೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. 2003 ರಲ್ಲಿ, ಯಾದವ್ ಅವರು ತಮ್ಮ ಮಾಜಿ ಅನುಯಾಯಿಯಾದ ನಿತೀಶ್ ಕುಮಾರ್ ಅವರನ್ನು ಒಳಗೊಂಡಿರುವ ಸಂಯುಕ್ತ ಜನತಾದಳದ ಅಧ್ಯಕ್ಷರಾಗಿದ್ದರು.
ದೇಶದ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿ, ‘ಶರದ್ ಯಾದವ್ ಅವರ ನಿಧನದಿಂದ ನೋವಾಗಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅವರು ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡಿದ್ದರು. ಅವರು ಡಾ. ಲೋಹಿಯಾ ಅವರ ಆದರ್ಶಗಳಿಂದ ಬಹಳ ಪ್ರೇರಿತರಾಗಿದ್ದರು.ಅವರ ಜೊತೆಗಿನ ಸಂವಾದವನ್ನು ನಾನು ಸದಾ ಗೌರವಿಸುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’ ಎಂದು .ಹೇಳಿದ್ದಾರೆ.
ಇದನ್ನು ಒದಿರಿ: ಸಂಪೂರ್ಣ ಜೋಶಿಮಠ ಮುಳುಗುವ ಸಾಧ್ಯತೆ ಎಚ್ಚರಿಕೆ ನೀಡಿದ ಇಸ್ರೋ !