ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (104) ಇಂದು‌ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಕೊರೊನಾ ವೈರಸ್ ಗೆ ತುತ್ತಾಗಿ, ಅದರೊಂದಿಗೆ ಹೋರಾಡಿ ಗೆದ್ದು ಬಂದಿದ್ದರು. ಆದರೆ ಹೃದಯ ಸಂಬಂಧಿ ಅನಾರೋಗ್ಯಕ್ಕೆ ತುತ್ತಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಎಚ್​.ಎಸ್.ದೊರೆಸ್ವಾಮಿ ಅವರ ಪೂರ್ತಿ ಹೆಸರು ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಏಪ್ರಿಲ್ 10, 1918 ರಲ್ಲಿ ಜನಿಸಿದ್ದ ಅವರು ಬ್ರಿಟಿಷರ ವಿರುದ್ಧ ತೊಡೆ ತಟ್ಟಿ ಹೋರಾಟಕ್ಕೆ ದುಮುಕಿದ್ದರು. ಆಗಿನ ಜನಪ್ರೀಯ ಪತ್ರಿಕೆ ‘ಪೌರವಾಣಿ’ಯ ವರದಿಗಾರರಾಗಿ ಪ್ರಸಿದ್ದಿ ಪಡೆದಿದ್ದರು.

ಇದನ್ನೂ ಓದಿರಿ: ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಉಚಿತ ಸ್ಮಾರ್ಟ್ ಫೋನ್: ಸರ್ಕಾರದ ಚಿಂತನೆ

LEAVE A REPLY

Please enter your comment!
Please enter your name here