fssai-recruitment-2021-for-233-technical-officer-assistant-and-various-posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) 233 ತಾಂತ್ರಿಕ ಅಧಿಕಾರಿ, ಆಹಾರ ವಿಶ್ಲೇಷಕ, ಕೇಂದ್ರ ಆಹಾರ ಸುರಕ್ಷತಾ ಅಧಿಕಾರಿ (CFSO), ವೈಯಕ್ತಿಕ ಸಹಾಯಕ, ಸಹಾಯಕ ವ್ಯವಸ್ಥಾಪಕ, ಸಹಾಯಕ, ಹಿಂದಿ ಅನುವಾದಕ, ಐಟಿ ಸಹಾಯಕ ಮತ್ತು ಕಿರಿಯ ಸಹಾಯಕ ಗ್ರೇಡ್-I ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ :

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ನೇಮಕಾತಿ 2021 ರ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಬಿ.ಇ/ಬಿ.ಟೆಕ್, ಪದವಿ, 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವುದರ ಜೊತೆಗೆ ಎಫ್‌ಎಸ್‌ಎಸ್‌ಎಐ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :

ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. SC/ST/OBC ಅಭ್ಯರ್ಥಿಗಳಿಗೆ ಸಣ್ಣ ಪ್ರಮಾಣದ ವಯೋಮಿತಿಯ ಸಡಿಲಿಕೆ ಇರುವುದು.

ಆಯ್ಕೆ ಪ್ರಕ್ರಿಯೆ :

FSSAI ನೇಮಕಾತಿ 2021ರ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಹಂತ I/ಹಂತ II)/ಲಿಖಿತ ಪರೀಕ್ಷೆ + ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿಶುಲ್ಕ :

ಎಫ್‌ಎಸ್‌ಎಸ್‌ಎಐ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿಗದಿತ ಮೊತ್ತ 1,500/-ರೂ ಮತ್ತು ರೂ. 500/- (SC/ST/ಮಹಿಳೆಯರು/Ex -SM/PwBD/EWS – ಸೂಚನೆ ಶುಲ್ಕಗಳು ಮಾತ್ರ) ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿಸಬಹುದು.

ಅರ್ಜಿ ಸಲ್ಲಿಕೆ :

FSSAI ನೇಮಕಾತಿ 2021 ರ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.fssai.gov.in ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ  ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 13/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/11/2021

ಅಧಿಸೂಚನೆ
ವೆಬ್ ಸೈಟ್

ತಾಜಾ ಸುದ್ದಿಗಳಿಗಾಗಿ ನಮ್ಮನ್ನು ಸಾಮಾಜಿಕ ತಾಣಗಳಲ್ಲಿ ಫಾಲೋ ಮಾಡಿ
ವಾಟ್ಸಪ್ಟೆಲಿಗ್ರಾಮ್ಕೂ ಆಫ್ಫೇಸ್ ಬುಕ್ ಫೇಜ್

ಪ್ರತಿಷ್ಠಿತ ನ್ಯೂಸ್ ಆಫ್ ಗಳಲ್ಲಿ ನಮ್ಮನ್ನು ಫಾಲೋ ಮಾಡಿ
ಡೈಲಿಹಂಟ್ಗೂಗಲ್ ನ್ಯೂಸ್ 

LEAVE A REPLY

Please enter your comment!
Please enter your name here