ganesha-festival-guidelines-to-be-revised-says-cm-bs-yeddyurappa

ಬೆಂಗಳೂರು: ಗಣೇಶ ಚತುರ್ಥಿಯ ಆಚರಣೆಗೆ ತೊಡಕಾಗಿದ್ದ ಕೆಲವು ಮಾರ್ಗ ಸೂಚಿಗಳನ್ನು ಬದಲಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಗಣೇಶ ಉತ್ಸವ ಆಚರಣೆಗೆ ಅಡ್ಡಿಯುಂಟುಮಾಡಲಾಗುತ್ತಿದೆ ಎಂದು ಸಾರ್ವಜನಿಕರಿಂದ ಆಕ್ಷೇಪ ಉಂಟಾದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಈ ಪರಿಷ್ಕರಣೆಯನ್ನು ಮಾಡಲಾಗಿದೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಯಡಿಯೂರಪ್ಪ ಅವರು, ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ  ಜನರ ಧಾರ್ಮಿಕ ಭಾವನೆಗೆ ಅಡ್ಡಿ ಮಾಡಬಾರದು ಎನ್ನುವ ಉದ್ದೇಶದಿಂದ ನಿಯಮವನ್ನು ಪರಿಷ್ಕರಿಸಲಾಗಿದೆ. ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಯಾವುದೇ ತೊಂದರೆ ಉಂಟಾಗದಂತೆ ಮಾರ್ಗಸೂಚಿಯನ್ವಯ ಹಬ್ಬ ಆಚರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ 7 ಷರತ್ತುಗಳನ್ನು ವಿಧಿಸಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡಲಾಗಿದೆ. 

  • ಗೌರಿ ಗಣೇಶ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ತಮ್ಮ ಮನೆಗಳಲ್ಲಿ/ಸರ್ಕಾರಿ/ಖಾಸಗಿ /ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯ ಜನರ ಒಟ್ಟುಗೂಡುವಿಕೆಯಲ್ಲಿ ಮಾಡಬೇಕು.
  • ಸಾರ್ವಜನಿಕ ಸ್ಥಳದಲ್ಲಿ ಕನಿಷ್ಟ 4 ಅಡಿಗೆ ಮೀರದಂತೆ ಹಾಗೂ ಮನೆಗಳಲ್ಲಿ 2 ಅಡಿಗೆ ಮೀರದಂತೆ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.
  • ಪಾರಂಪರಿಕ ಗಣೇಶೋತ್ಸವ,ಸಮಿತಿಗಳು,ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತ/ಮುನಿಸಿಪಲ್ ಕಾರ್ಪೋರೇಷನ್ ಗಳಿಂದ ಪೂರ್ವಾನುಮತಿ ಪಡೆದು ಉತ್ಸವ ಆಚರಿಸತಕ್ಕದ್ದು. ಪ್ರತಿ ವಾರ್ಡ್ ಗೆ ಒಂದರಂತೆ, ಗ್ರಾಮಕ್ಕೆ ಒಂದರಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಉತ್ಸವ ಆಚರಿಸಬಹುದು.
  • ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾಗಿ ಆವರಣ ನಿರ್ಮಿಸುವುದು. 20 ಕ್ಕಿಂತ ಹೆಚ್ಚಿನ ಜನರು ಸೇರದಂತೆ ನೋಡಿಕೊಳ್ಳುವುದು.
  • ಗಣೇಶೋತ್ಸವ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಕಾರ್ಯಕ್ರಮ ಆಯೋಜನೆಗೆ ಅವಕಾಶವಿರುವುದಿಲ್ಲ.
  • ಗಣೇಶ್ ಮೂರ್ತಿ ತುರುವಾಗ ಹಾಗೂ ವಿಸರ್ಜನೆ ವೇಳೆ ಯಾವುದೇ ಕಾರಣಕ್ಕೆ ಮೆರವಣಿಗೆ ಹೊರಡುವಂತಿಲ್ಲ.
  • ಪಾರಂಪರಿಕ ಗಣೇಶ ಮೂರ್ತಿ ಮತ್ತು ವಿಗ್ರಹ ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು. ಸರಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯನ್ನು ಸಮೀಪದ ಮತ್ತು ಸ್ಥಾಳೀಯ ಸಂಸ್ಥೆ ಸೂಚಿತ ಜಾಗದಲ್ಲಿ ವಿಸರ್ಜಿಸುವುದು ಎಂದು ಮುಖ್ಯಮಂತ್ರಿ ಅವರು ಮಾರ್ಗಸೂಚಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here