government-hikes-dearness-allowance-by-3-percent-for-central-employees

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸರಕಾರ ದೀಪಾವಳಿ ಉಡುಗೊರೆಯನ್ನು ನೀಡಿದೆ. ಶೇ 3 ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕಳೆದ ಮೂರೂ ತಿಂಗಳ ಹಿಂದಷ್ಟೇ ಮೋದಿ ಸರಕಾರ ನೌಕರರು ಮತ್ತು ಪಿಂಚಣಿದಾರರಿಗೆ ಡಿಎ ಮತ್ತು ಡಿಆರ್ ನ್ನು ಶೇ 17 ರಿಂದ ಶೇ 28 ಕ್ಕೆ ಹೆಚ್ಚಳ ಮಾಡಿತ್ತು. ಇದೀಗ ಮತ್ತೊಮ್ಮೆ ಸರಕಾರ ಡಿಎಯನ್ನು ಶೇ 3 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್​ ಠಾಕೂರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗುವಂತೆ ಕೇಂದ್ರ ಕ್ಯಾಬಿನೆಟ್ ಗುರುವಾರ ತುಟ್ಟಿ ಭತ್ಯೆ ಮತ್ತು ಅನ್ಯಾಯ ಪರಿಹಾರವನ್ನು ಶೇಕಡಾ 3 ರಿಂದ 31 ಕ್ಕೆ ಹೆಚ್ಚಿಸಿದೆ ಎಂದು ಹೇಳಿದರು.

                                  Follow us on:
                     

ಕೋವಿಡ್ ಸಂಕಷ್ಟದ ಸಮಯದಲ್ಲಿ ಸರಕಾರ ಭತ್ಯೆಗಳನ್ನು ನಿಲ್ಲಿಸಿತ್ತು. ಜನವರಿ 1, 2020, ಜುಲೈ 1, 2020 ಮತ್ತು ಜನವರಿ 1, 2021ರ ತುಟ್ಟಿಭತ್ಯೆಗಳನ್ನು ಸರ್ಕಾರ ನೌಕರರಿಗೆ ನೀಡಿರಲಿಲ್ಲ. ಸಾಂಕ್ರಾಮಿಕ ರೋಗದ ಸಂಕಷ್ಟವನ್ನು ಗಮನದಲ್ಲಿ ಇಟ್ಟುಕೊಂಡು ಸರಕಾರ ಮೂರು ಕಂತುಗಳನ್ನು ತಡೆಹಿಡಿದಿತ್ತು. ಈ ಕಾರಣಕ್ಕಾಗಿ ಜುಲೈನಲ್ಲಿ ಭತ್ಯೆಗಳನ್ನು ಮರು ಆರಂಭಿಸಿ ಶೇ 28 ಹೆಚ್ಚಳವನ್ನು ಸಹ ಮಾಡಿತ್ತು.

ಇದನ್ನೂ ಓದಿರಿ: Covid Vaccination: 100 ಕೋಟಿ ಡೋಸ್ ಕೋವಿಡ್-19 ಲಸಿಕೆ ವಿತರಣೆ; ಕೆಂಪು ಕೋಟೆಯಲ್ಲಿ ಹಾರಾಡಲಿದೆ 1,400 ಕೆಜಿ ತೂಕದ ತಿರಂಗ! 

LEAVE A REPLY

Please enter your comment!
Please enter your name here