ನವದೆಹಲಿ: ರೈತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ವಿವಾಧಿತ ಕೃಷಿ ಕಾನೂನನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ಒಂದು ವರ್ಷದ ಸುದೀರ್ಘ ರೈತರ ಹೋರಾಟಕ್ಕೆ ಫಲ ಈ ಮೂಲಕ ಫಲ ಸಿಕ್ಕಂತಾಗಿದೆ.
ದೇಶವನ್ನುದ್ದೇಶಿಸಿ ಇಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಕಾಯ್ದೆ ಜಾರಿ ಮಾಡಲಾಗಿತ್ತು. ನಾವು ಈ ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಪ್ರಯತ್ನವನ್ನು ಮಾಡಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ.
ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.
Addressing the nation. https://t.co/daWYidw609
— Narendra Modi (@narendramodi) November 19, 2021